No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಗ್ರಾಮ ವಾಸ್ತವ್ಯಕ್ಕೆ ಡಿಸಿಗೆ ಅದ್ದೂರಿ ಸ್ವಾಗತ: ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ

kalpa News by kalpa News
February 24, 2021
in Small Bytes, ಶಿಕಾರಿಪುರ
0
ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

ಅವರು ಶನಿವಾರ ಶಿಕಾರಿಪುರ ತಾಲೂಕಿನ ಉಡುಗಣಿ ಹೋಬಳಿಯ ತಡಸನಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಕಂದಾಯ ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದೆ. ಇದರೊಂದಿಗೆ ಪಂಚಾಯತ್‌ರಾಜ್ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮನ್ವಯ ಮಾಡಿಕೊಂಡು ಗ್ರಾಮೀಣ ಭಾಗದ ಜನಜೀವನವನ್ನು ಉತ್ತಮಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿ ಹೋಬಳಿಯಲ್ಲಿರುವ ಗ್ರಾಮಗಳ ಸಮಸ್ಯೆಗಳು ಬಹುತೇಕ ಒಂದೇ ರೀತಿಯಾಗಿರುತ್ತದೆ. ಒಂದು ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರೂ, ಆಯಾ ಹೋಬಳಿಯ ಸಮಸ್ಯೆಗಳನ್ನು ಅರಿಯಲು ಇದರಿಂದ ಸಾಧ್ಯವಾಗುತ್ತದೆ. ಹೋಬಳಿ ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಹಾಜರಿರುವುದರಿಂದ ಸಂಬಂಧಿಸಿದ ಎಲ್ಲಾ ಗ್ರಾಮಗಳ ಸಮಸ್ಯೆಗಳ ಪರಿಹಾರ ಸಾಧ್ಯವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಶಿಕಾರಿಪುರ ತಾಲೂಕಿನ ಎಲ್ಲಾ ಶಾಲೆಗಳಿಗೆ ಅತ್ಯುತ್ತಮ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಶಿಕ್ಷಕರು ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಆ ಮೂಲಕ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಎಲ್ಲಾ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಶುದ್ಧ ಮನಸ್ಸಿನಿಂದ ಕರ್ತವ್ಯ ನಿರ್ವಹಿಸಿ ಬಡವರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಅರ್ಜಿಗಳನ್ನು ಪ್ರತಿಯೊಬ್ಬರೂ ಸಕಾಲದಲ್ಲಿ ತಮ್ಮ ಹಂತದಲ್ಲಿಯೇ ವಿಲೇವಾರಿ ಮಾಡಿದರೆ ಜಿಲ್ಲಾಧಿಕಾರಿಗಳು ಗ್ರಾಮ ಮಟ್ಟಕ್ಕೆ ಬಂದು ಅರ್ಜಿಗಳನ್ನು ಸ್ವೀಕರಿಸುವ ಪ್ರಶ್ನೆಯೇ ಬರುವುದಿಲ್ಲ ಎಂದರು.

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ
ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಗ್ರಾಮ ಪ್ರವೇಶಿಸಿದ ಜಿಲ್ಲಾಧಿಕಾರಿ ಅವರನ್ನು ಗ್ರಾಮಸ್ಥರು, ಡೊಳ್ಳು, ಪಟಾಕಿಯೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ಗ್ರಾಮದ ಶಾಲೆಗೆ ಕರೆ ತಂದರು. ಶಾಲೆಯ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ಸಾಮಾನ್ಯ ಆರೋಗ್ಯ ತಪಾಸಣೆ ಮಾತ್ರವಲ್ಲದೆ ಕಣ್ಣು, ಕಿವಿ, ಚರ್ಮ ಇತ್ಯಾದಿ ತಪಾಸಣೆಗೂ ಇಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ತಾಲೂಕಿನ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು.

ಆರೋಗ್ಯ ಕರ್ನಾಟಕ ಯೋಜನೆಯಡಿ ಸ್ಥಳದಲ್ಲಿಯೇ ಕಾರ್ಡ್ ಮುದ್ರಿಸಿ ನೀಡುವ ಸೌಲಭ್ಯವನ್ನು ಸಹ ಕಲ್ಪಿಸಲಾಗಿತ್ತು. ಶಾಲಾ ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು 6 ಮತ್ತು 7ನೆಯ ತರಗತಿಯ ಮಕ್ಕಳೊಂದಿಗೆ ಶಿಕ್ಷಕರಾಗಿ ಬೆರೆತರು. ಗಣಿತ, ಇಂಗ್ಲೀಷ್, ಕನ್ನಡ ವಿಷಯದ ಬಗ್ಗೆ ಮಕ್ಕಳ ಸಾಮಥ್ರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ ಅವರು ಗಣಿತದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಶಿಕಾರಿಪುರ ತಹಶೀಲ್ದಾರ್ ಕವಿರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Grama VastavyaK B ShivakumarKannada News WebsiteLatest News KannadaMP B Y RaghavendraShikaripuraShimogaShivamoggaShivamogga Newsಗ್ರಾಮ ವಾಸ್ತವ್ಯಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಬಿ.ವೈ. ರಾಘವೇಂದ್ರಶಿಕಾರಿಪುರಶಿವಮೊಗ್ಗ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

Next Post

ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಬರುವುದಿಲ್ಲ

kalpa News

kalpa News

Next Post
ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಬರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL