No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ | ಸಂಸದ ರಾಘವೇಂದ್ರ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 19, 2024
in ಶಿವಮೊಗ್ಗ
0
ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ | ಸಂಸದ ರಾಘವೇಂದ್ರ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೊದಲ ಮತ್ತು ದ್ವಿತೀಯ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಬಾದಿತ ರೈತರಿಗೆ ಪರಿಹಾರಧನ ವಿತರಿಸಲು ಕ್ರಮ ಕೈಗೊಂಡು ವರದಿ ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಶಿವಮೊಗ್ಗ – ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಲೈನ್ #Shivamogga-Shikaripura-Ranebennuru Railway Line ವಿಸ್ತರಣೆ, ಭೂಸ್ವಾದೀನ ಪ್ರಕ್ರಿಯೆ, ಪರಿಹಾರ ಧನ ವಿತರಣೆ, ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿನ ರೈಲ್ವೇ ಕಾಮಗಾರಿಗಳು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಹಕಾರವನ್ನು ಮರೆಯುವಂತಿಲ್ಲ ಎಂದ ಅವರು, ರೈಲ್ವೇ ಯೋಜನೆಯ ಭೂಸ್ವಾದೀನ, ಯೋಜನಾ ವೆಚ್ಚಕ್ಕೆ ಸಂಬಂಧಿಸಿದಂತೆ ರಾಜ್ಯದ ಪಾಲಿನ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆಗೊಳಿಸಿ ಅಗತ್ಯ ನೆರವು ಒದಗಿಸಿದೆ. ಅವರ ಸಹಕಾರದಿಂದ ರೈಲ್ವೇ ಯೋಜನೆಗಳಿಗೆ ಕೇಂದ್ರದಿಂದ ಹೆಚ್ಚಿನ ಅನುದಾನ ತರುವಲ್ಲಿ ಸಹಕಾರಿಯಾಗಿದೆ ಎಂದರು.

ಪ್ರಸ್ತುತ ಉಷಾ ನರ್ಸಿಂಗ್ ಹೋಂ ವರ್ತುಲದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಯಲ್ಲಿ ಸಣ್ಣ ಪ್ರಮಾಣದ ಲೋಪಗಳಿರುವುದು ಗಮನಕ್ಕೆ ಬಂದಿದೆ. ಮುಂದಿನ ಒಂದು ವಾರದೊಳಗಾಗಿ ಅದನ್ನು ಗುತ್ತಿಗೆದಾರರು ಸರಿಪಡಿಸಬೇಕು. ಅಲ್ಲದೇ ಸದರಿ ಮೇಲ್ಸೇತುವೆಗೆ ಇರುವ ಸಂಪರ್ಕ ರಸ್ತೆಯೂ ಸಹ ವiಹಾನಗರಪಾಲಿಕೆಯವರು ದುರಸ್ತಿಗೊಳಿಸಿ ಸರಿಪಡಿಸುವಂತೆ ಸೂಚಿಸಿದರು.
ಹೊಸ ರೈಲ್ವೇ ಮಾರ್ಗದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೆಲವು ರೈತರಿಗೆ ಪರಿಹಾರ ಧನ ವಿತರಣೆಯಾಗದಿರುವ ಬಗ್ಗೆ ದೂರುಗಳಿದ್ದು, ಸಂಬಂಧಿಸಿದ ಅಧಿಕಾರಿಗಳು ರೈತರೊಂದಿಗೆ ಚರ್ಚಿಸಿ ಪರಿಹಾರಧನ ನೀಡಬೇಕು. ಎರಡನೇ ಹಂತದ ಕೆಲವು ಪ್ರದೇಶಗಳಲ್ಲಿ ಸ್ವಾದೀನಪಡಿಸಿಕೊಳ್ಳಲಾಗುತ್ತಿರುವ ಕೃಷಿ ಭೂಮಿಗೆ ದರ ನಿಗಧಿಪಡಿಸಬೇಕಾದ ಅಗತ್ಯವಿದ್ದು, ಕೂಡಲೇ ಪರಿಹಾರ ಧನವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಈ ನೂತನ ರೈಲ್ವೇ ಮಾರ್ಗದಲ್ಲಿ ಬರುವ ಅರಣ್ಯ ಭೂಮಿ ಮತ್ತು ಖಾಸಗಿ ಭೂಮಿಯಲ್ಲಿ ಬರುವ ಮರಗಳನ್ನು ಗುತ್ತಿಗೆದಾರರು ನಿಯಮಾನುಸಾರ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಅನುಮತಿ ಪಡೆದು, ತೆರವುಗೊಳಿಸಬೇಕು. ಅಗತ್ಯವಿದ್ದಲ್ಲಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖಾಧಿಕಾರಿಗಳು ಸಹಕಾರ ನೀಡುವಂತೆ ಅವರು ಸೂಚಿಸಿದರು.

Also read: ಸ್ತ್ರೀಯರಲ್ಲಿ ಆತ್ಮವಿಶ್ವಾಸ ಮೂಡಿಸುವಲ್ಲಿ ಶಿವಮೊಗ್ಗ ಮಲ್ಟಿಪರ್ಪಸ್ ಸೊಸೈಟಿ ಸೇವೆ ಶ್ಲಾಘನೀಯ: ಎಂಎಲ್’ಸಿ ಡಾ. ಸರ್ಜಿ

ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಕೂಡಲೇ ಇಲಾಖಾ ಅಧಿಕಾರಿಗಳು ಪೂರ್ಣಗೊಳಿಸಬೇಕು. ಮೊದಲ ಹಂತದ ಮಾರ್ಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಹಸ್ತಾಂತರಿಸಲಾದ ಭೂಮಿಯಲ್ಲಿ ಗುತ್ತಿಗೆದಾರರು ಕಾಮಗಾರಿಯನ್ನು ಆರಂಭಿಸಬೇಕು. ಅಲ್ಲದೇ ರೈತರು ಮತ್ತೆ ಕೃಷಿ ಚಟುವಟಿಕೆ ಆರಂಭಿಸಿ ಕಾಮಗಾರಿ ವಿಳಂಬಕ್ಕೆ ಕಾರಣವಾಗದಂತೆ ನೋಡಿಕೊಳ್ಳಬೇಕೆಂದವರು ನುಡಿದರು.

ಶಿಕಾರಿಪುರ-ಶಿವಮೊಗ್ಗ ಮಾರ್ಗದಲ್ಲಿ 562ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಆ ಪೈಕಿ 421 ಎಕರೆ ಭೂಮಿಯನ್ನು ಈಗಾಗಲೇ ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. 7.7ಎಕರೆ ಭೂಪ್ರದೇಶದ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸೂಚಿಸಲಾಗಿದೆ.

ಉಳಿದಂತೆ ಇಟ್ಟಿಗೆಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದ ಮಾರ್ಗದಲ್ಲಿನ ಮರಗಳ ತೆರವು ಕಾರ್ಯದ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು. ತಿಮ್ಮಲಾಪುರ ಮತ್ತು ದೂಪದಹಳ್ಳಿಯಲ್ಲಿನ ಮರಗಳ ತೆರವು ಕಾರ್ಯಕ್ಕೆ ಇಂದೇ ಆದೇಶ ಹೊರಡಿಸಲು ಸೂಚಿಸಲಾಗಿದೆ ಎಂದರು.

ಶಿಕಾರಿಪುರ ತಾಲೂಕಿನ ಎಳನೀರುಕೊಪ್ಪ ಗ್ರಾಮದಲ್ಲಿ ರೈಲ್ವೇ ಇಲಾಖೆಯವರು ನಿಗಧಿಪಡಿಸಿದ ಭೂಮಿಗಿಂತ ಹೆಚ್ಚಿನ ಭೂಪ್ರದೇಶ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ದೂರುಗಳಿವೆ. ಕೂಡಲೇ ಸಂಬಂಧಿಸಿದ ಸರ್ವೇ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.
ಎರಡನೇ ಹಂತದ ಭೂಸ್ವಾದೀನ ಪ್ರಕ್ರಿಯೆ ನಿರೀಕ್ಷಿತ ಪ್ರಗತಿ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಿಪಡಿಸಿದ ಅವರು, ಮುಂದಿನ ಎರಡು ತಿಂಗಳಲ್ಲಿ ರೈತರಿಗೆ ಪರಿಹಾರಧನ ಸಕಾಲದಲ್ಲಿ ಒದಗಿಸುವಂತೆ ಸೂಚಿಸಿದರು. ಕೆಲವು ಕಡೆ ಮಾರ್ಗ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಈಗಾಗಲೇ ಗುರುತಿಸಲಾದ ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗುರುತಿಸಿರುವಂತೆಯೇ ಮುಂದುವರೆಯಲಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಿ, ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಮೈಸೂರು ನೈಋತ್ಯ ರೈಲ್ವೇ ಡೆಪ್ಯೂಟಿ ಚೀಫ್ ಇಂಜಿನಿಯರ್ ಪ್ರದೀಪ್‍ಪುರಿ, ಮೂರ್ತಿರಾಜು, ವೂಟನ್, ಹರ್ಷವರ್ಧನ್, ಮಹಾನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ವಿಶೇಷ ಭೂಸ್ವಾದೀನಾಧಿಕಾರಿ ಶ್ರೀಮತಿ ನಜ್ಮಾಬಾನು, ಉಪವಿಭಾಗಾಧಿಕಾರಿ ಯತೀಶ್, ಪ್ರೊಬೇಷನರ್ ಐಎಎಸ್ ಅಧಿಕಾರಿ ದೃಷ್ಠಿಜೈಸ್ವಾಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP B Y RaghavendraNews in KannadaNews KannadaShimogaShivamogga NewsShivamogga-Shikaripura-Ranebennuru Railway Lineಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ - ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಲೈನ್ಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet123Send
Previous Post

ಶಿವಮೊಗ್ಗ | ಕಲ್ಮಶಗೊಂಡ ತುಂಗಾ ನದಿ | ಸ್ಥಳಕ್ಕೆ ಭೇಟಿ ನೀಡಿದ ನಟ ಅನಿರುದ್ ಹೇಳಿದ್ದೇನು?

Next Post

ಜೂನ್ 21 | ಶುಭಮಂಗಳ ಸಮುದಾಯ ಭವನದಲ್ಲಿ ಯೋಗ ದಿನಾಚರಣೆ | ಅನಿಲ್‍ಕುಮಾರ್ ಶೆಟ್ಟರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೂನ್ 21 | ಶುಭಮಂಗಳ ಸಮುದಾಯ ಭವನದಲ್ಲಿ ಯೋಗ ದಿನಾಚರಣೆ | ಅನಿಲ್‍ಕುಮಾರ್ ಶೆಟ್ಟರ್

ಜೂನ್ 21 | ಶುಭಮಂಗಳ ಸಮುದಾಯ ಭವನದಲ್ಲಿ ಯೋಗ ದಿನಾಚರಣೆ | ಅನಿಲ್‍ಕುಮಾರ್ ಶೆಟ್ಟರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 30-ಎಪ್ರಿಲ್ 3: ಮೈಸೂರು-ನಂಜನಗೂಡು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 21, 2026
A Blissful concert by the Divine Duo

A Blissful concert by the Divine Duo

March 21, 2026
ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

ಬಾಣಸವಾಡಿ ಮತ್ತು ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ

March 21, 2026
ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 23-25 | ವಿಕಸಿತ ಭಾರತ 2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ ರಾಷ್ಟ್ರೀಯ ಸಮ್ಮೇಳನ

March 21, 2026
ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ | ಸುತ್ತೂರು ಶ್ರೀ ಸಾನಿಧ್ಯ, ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೆಕ್ಕಿನಕಲ್ಮಠ ಶ್ರೀಗಳು

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL