ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಳ ಮೀಸಲಾತಿ ಕುರಿತಂತೆ ನಿನ್ನೆ ಶಿಕಾರಿಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶಿಕಾರಿಪುರದಲ್ಲಿ ನಿನ್ನೆ ನಡೆದ ಗಲಭೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ತನಿಖೆ ನಡೆದಿದೆ ಎಂದಿದ್ದಾರೆ.
ಇನ್ನು, ಮಾಹಿತಿಯೊಂದರ ಪ್ರಕಾರ, ಕಲ್ಲು ತೂರಾಟ ಹಾಗೂ ಪೊಲೀಸರ ಮೇಲೆ ದಾಳಿಗೆ ಸಂಬಂಧಿಸಿದಂತೆ ಸುಮಾರು 20ಕ್ಕೂ ಅಧಿಕ ಮಂದಿಯ ವಿರುದ್ಧ ಎಫ್’ಐಆರ್ ದಾಖಲಾಗಿದೆ ಎಂದು ಹೇಳಲಾಗಿದೆ. ಇದರಲ್ಲಿ ಮೂರು ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
Also read: ಆಧಾರ್-ಪ್ಯಾನ್ ಲಿಂಕ್: ಗಡುವು ವಿಸ್ತರಣೆ, ಎಷ್ಟು ದಿನ ಅವಕಾಶ? ಇಲ್ಲಿದೆ ಆದೇಶ ಪ್ರತಿ
ಒಳಮೀಸಲಾತಿಗೆ ಕುರಿತಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುವುದನ್ನು ವಿರೋಧಿಸಿ ಬಂಜಾರ ಸಮುದಾಯದವರು ನಿನ್ನೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಉದ್ರಿಕ್ತಗೊಂಡ ಜನರು ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಅಲ್ಲದೇ, ನಿವಾಸದ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ್ದರು. ಇದನ್ನು ಚದುರಿಸಲು ಯತ್ನಿಸಿದ ಪೊಲೀಸರ ಮೇಲೆಯೇ ಕಿಡಿಗೇಡಿಗಳು ಹಲ್ಲೆಗೆ ಮುಂದಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post