ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೊಲೆ ಪ್ರಕರಣಕ್ಕೆ #Murder Case ಸಂಬಂಧಿಸಿದಂತೆ ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ #Life Imprisonment ವಿಧಿಸಿ, ಶಿವಮೊಗ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗ ನಗರದ ಮಿಳಘಟ್ಟದ ನಿವಾಸಿ ಶಹಬಾಜ್ ಷರೀಫ್ (20), ಟೆಂಪೋ ಸ್ಟ್ಯಾಂಡ್ ನಿವಾಸಿ ವಸೀಂ ಅಕ್ರಂ ಯಾನೆ ಚೆ ಉಂಗ್ಲಿ (20), ಬುದ್ದ ನಗರದ ನಿವಾಸಿ ವಸೀಂ ಅಕ್ರಮ್ ಯಾನೆ ಕಾಲಾ ವಾಸೀಂ (20) ಹಾಗೂ ಮುರಾದ್ ನಗರದ ನಿವಾಸಿ ಫಯಾಜ್ ಉಲ್ಲಾ ರೆಹಮಾನ್ ಯಾನೆ ರುಮಾನ್ (23) ಶಿಕ್ಷೆಗೊಳಗಾದ ಯುವಕರೆಂದು ಗುರುತಿಸಲಾಗಿದೆ.

ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ನಿನ್ನೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
Also read: ತೀವ್ರ ಚಳಿ | ಒಲೆಗೆ ಬೆಂಕಿ ಹಾಕಿ ಮಲಗಿದ್ದ ದಂಪತಿ ಸಾವು
ಪ್ರಕರಣದ ಹಿನ್ನೆಲೆ
ಶಿವಮೊಗ್ಗ ತಾಲೂಕು ಹೊಸಳ್ಳಿ ನಿವಾಸಿ, ಮೆಕಾನಿಕ್ ಕೆಲಸ ಮಾಡುತ್ತಿದ್ದ ಜಿಕ್ರುಲ್ಲಾ (೨೮) ಎಂಬ ಯುವಕನು, ಬುದ್ದ ನಗರದಲ್ಲಿ ಕಾರ್ ಪಾರ್ಕಿಂಗ್ ವಿಚಾರದಲ್ಲಿ ಗ್ಯಾಸ್ ಇಮ್ರಾನ್ ನೊಂದಿಗೆ ಗಲಾಟೆ ಮಾಡಿಕೊಂಡಿದ್ದನು. ಹಾಗೆಯೇ ಈ ಹಿಂದೆ ಟ್ವಿಸ್ಟ್ ಇಮ್ರಾನ್ ಎಂಬುವನೊಂದಿಗೆ ಜಗಳ ಮಾಡಿಕೊಂಡಿದ್ದ.
ಸದರಿ ವೈಷಮ್ಯದ ಹಿನ್ನೆಲೆಯಲ್ಲಿ 19-3-2022ರಂದು ಎನ್ ಟಿ ರಸ್ತೆಯ ಫಲಕ್ ಶಾದಿ ಮಹಲ್ ಪಕ್ಕದ ರಸ್ತೆಯಲ್ಲಿ ಜಿಕ್ರುಲ್ಲಾ ನನ್ನು ಶಹಬಾಜ್, ರುಮಾನ್, ವಸೀಂ, ಕಾಲಾ ವಸೀಂ ಹಾಗೂ ಇತರರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು.

ಅಂದಿನ ತನಿಖಾಧಿಕಾರಿಯಾದ ಇನ್ಸ್’ಪೆಕ್ಟರ್ ಅಂಜನ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು ಎಂದು ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post