ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರಲ್ಲಿ ಓರ್ವ ಹರಮಘಟ್ಟದವನು ಹಾಗೂ ಇನ್ನಿಬ್ಬರು ಸೂರಗೊಂಡನಕೊಪ್ಪದವರು ಎಂದು ತಿಳಿದುಬಂದಿದ್ದು, ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು ಶಿಕಾರಿಪುರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಮಾರುತಿ ಒಮಿನಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post