ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಗೋಂದಿ ಚಟ್ನಳ್ಳಿ ಬಳಿಯಲ್ಲಿ ಚಲಿಸುತ್ತಿದ್ದ ಬೈಕಿನ ಮೇಲೆ ಮರವೊಂದು ಬಿದ್ದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಗೋಂದಿ ಚಟ್ನಳ್ಳಿ ಮುಖ್ಯರಸ್ತೆಯಲ್ಲಿ ದಂಪತಿ ತಮ್ಮ ಮಗುವಿನೊಂದಿಗೆ ಬೈಕ್’ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಬೈಕ್ ಮುಂದಕ್ಕೆ ಹಾರಿದೆ.
ಬೈಕ್ ಹಿಂದೆ ಬರುತ್ತಿದ್ದ ಲಾರಿ ಡ್ರೈವರ್ ತತಕ್ಷಣವೇ ಬ್ರೇಕ್ ಹಾಕಿದ್ದು, ಸಂಭವನೀಯ ಭಾರೀ ಅನಾಹುತ ಸ್ವಲ್ಪದಲ್ಲಿ ತಪ್ಪಿದೆ.
Also read: ವ್ಯಾಪಾರದ ಅಭಿವೃದ್ಧಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು | ಫೆ.15ರಂದು ವೆಬಿನಾರ್
ಮರ ಬಿದ್ದ ಪರಿಣಾಮ ಬೈಕ್’ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post