ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಿಪ್ಪನ್ ಪೇಟೆಯ ಸೂಡೂರು ಸೇತುವೆ ಬಳಿ ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #Accident ಓರ್ವ ಸ್ಥಳದಲ್ಲೇ ಮೃತಪಟ್ಟು, #Died on the spot ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದ್ದು, ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಮತ್ತೋರ್ವ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post