ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ನೂತನ ವಿಮಾನ ನಿಲ್ದಾಣವನ್ನು Shivamogga Airport ಪ್ರಧಾನಿ ನರೇಂದ್ರ ಮೋದಿ PM Narendra Modi ಇಂದು ಲೋಕಾರ್ಪಣೆಗೊಳಿಸಲಿದ್ದು, ಕಾರ್ಯಕ್ರಮ ನಡೆಯಲಿರುವ ವಿಮಾನ ನಿಲ್ದಾಣದತ್ತ ಜನ ಸಾಗರವೇ ಹರಿದುಬರತೊಡಗಿದೆ.
ನೂತನ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರುಗಳ ದಂಡೆ ಶಿವಮೊಗ್ಗದ ಕಡೆ ಮುಖ ಮಾಡಿದ್ದಾರೆ.

Also read: ಶಿವಮೊಗ್ಗದ ಮುಖ್ಯರಸ್ತೆಗಳಲ್ಲಿ ಟ್ರಾಫಿಕ್ ಜಾಮ್: ಸಾಲುಗಟ್ಟಿನಿಂತ ಸರ್ಕಾರಿ ಬಸ್‌ಗಳು
ಪ್ರಧಾನಿ ನರೇಂದ್ರ ಮೋದಿ ಬೇಟಿ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಖಾಕಿ ಸರ್ಪಗಾವಲು ಹಾಕಲಾಗಿದೆ. ಪ್ರಧಾನಿಯವರ ವಿಶೇಷ ಭದ್ರತಾ ಪಡೆ ಕೂಡ ಕಳೆದ ಒಂದು ವಾರದ ಹಿಂದೆಯೇ ಶಿವಮೊಗ್ಗಕ್ಕೆ ಆಗಮಿಸಿದೆ.












Discussion about this post