ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ತಾಲೂಕಿನ ಹಳ್ಳಿಯೊಂದರಲ್ಲಿ ಆಸ್ತಿ ವಿಚಾರದಲ್ಲಿ ಐದು ತಿಂಗಳ ಗರ್ಭಿಣಿ ಮೇಲೆ ಮಾವನೇ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ವರದಿಯಾಗಿದೆ.
ಮಾವ ಅತ್ಯಾಚಾರಕ್ಕೆ ಯತ್ನಿಸಿದ್ದರೆ ಅತ್ತೆ ಮತ್ತು ನಾದಿನಿಯರು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಗಂಡನೊಂದಿಗೆ ಗರ್ಭಿಣಿ ಬೇರೆ ಮನೆ ಮಾಡಿಕೊಂಡು ವಾಸವಾಗಿದ್ದು, ಗಂಡ ಕೆಲಸಕ್ಕೆ ತೆರಳಿದ ಸಮಯದಲ್ಲಿ ಮನೆಗೆ ನುಗ್ಗಿದ ಮಾವ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಅತ್ತೆ ಮತ್ತು ನಾದಿನಿಯರು ಹೊಟ್ಟೆಗೆ ಕಾಲಿನಿಂದ ಒದ್ದಿದ್ದಾರೆ. ಜತೆಗೆ ಮಗು ತೆಗೆಸುವಂತೆ ಬೆದರಿಕೆ ಹಾಕಿದ್ದಾರೆ. ತನ್ನ ಹೆಣ್ಣು ಮಕ್ಕಳಿಗೆ ಆಸ್ತಿ ದಾನಪತ್ರ ಮಾಡಿಕೊಟ್ಟಿದ್ದು ವರದಕ್ಷಿಣೆ ತರುವಂತೆ ಗರ್ಭಿಣಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಗರ್ಭಿಣಿ ತನ್ನ ಅತ್ತೆ-ಮಾವ, ನಾದಿನಿಯರು ಸೇರಿ ಎಂಟು ಮಂದಿ ವಿರುದ್ಧ ಶಿರಾಳಕೊಪ್ಪ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post