ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಪುರದಾಳು ಗ್ರಾಮದ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ Minister Madhu Bangarappa ನಡೆಸಿದರು.
ಶುಕ್ರವಾರ ಪುರದಾಳು ಗ್ರಾಮಕ್ಕೆ ಭೇಟಿ ನೀಡಿದ ಅವರು, ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿ, ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದರು.

Also read: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇದೇ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಕಲ್ಯಾಣ ಮಂಟಪ ಮಂಜೂರು ಮಾಡುವಂತೆ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರತ್ಮಾಕವಾಗಿ ಪ್ರತಿಕ್ರಿಯಿಸಿದ ಸಚಿವರು, ತಂದೆ ಬಂಗಾರಪ್ಪನವರಿಗೆ ಪುರದಾಳು ಗ್ರಾಮದ ಬಗ್ಗೆ ವಿಶೇಷ ಅಭಿಮಾನವಿತ್ತು. ರಸ್ತೆ, ತುಂಗಾ ಏತನೀರಾವರಿ, ಗೋದಾಮು ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ. ನಾನು ಕೂಡ ಕಲ್ಯಾಣ ಮಂಟಪವನ್ನು ಮಂಜೂರು ಮಾಡಿ ಅಗತ್ಯ ಅನುದಾನ ಒದಗಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್‍ಯನಾಯ್ಕ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಜಿ.ಡಿ ಮಂಜುನಾಥ್, ಮಾಜಿ ಎಂಎಲ್‌ಸಿ ಆರ್. ಪ್ರಸನ್ನ ಕುಮಾರ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post