ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿಯೇ ಪ್ರಖ್ಯಾತಿ ಪಡೆದಿರುವ ಶಿವಮೊಗ್ಗ ದಸರಾವನ್ನು #Shivamogga Dasara ಈ ಬಾರಿಯೂ ಕೂಡ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು, ಇದಕ್ಕೆ ಸರ್ಕಾರ ಕೂಡ ಸ್ಪಂದಿಸಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ( ಚೆನ್ನಿ) #MLA Chennabasappa ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿ ಇದಕ್ಕೆ ಸಂಬಂದಿಸಿದಂತೆ ನಾನು ಮತ್ತು ಡಿ.ಎಸ್. ಅರುಣ್ ಮೊನ್ನೆ ಸಿಎಂ ಭೇಟಿ ಮಾಡಿ ಪ್ರಸ್ತಾಪ ಮಾಡಿದ್ದೇವೆ. ದಸರಾ ಆಚರಣೆಗೆ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದ್ದೇವೆ ಮುಖ್ಯಮಂತ್ರಿಗಳು ಸಹ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದರು.

Also read: ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಭೀಕರ ಹಲ್ಲೆ ಆರೋಪ | ವಿಹಿಂಪ ಬೃಹತ್ ಪ್ರತಿಭಟನೆ
ಪಾಲಿಕೆಯಲ್ಲಿ ಈಗಾಗಲೇ 2.5 ಕೋಟಿ ಹಣವಿದೆ,ಇದರ ಜೊತೆಗೆ ಸರ್ಕಾರ ಕೊಡುವ ಹಣವನ್ನೂ ಸೇರಿಸಿ ಕೊಂಡು ಅದ್ದೂರಿಯಾಗಿ ಆಚರಿಸಲಾಗುವುದು. ಇದಕ್ಕಾಗಿ ಈಗಾಗಲೇ 14 ಸಮಿತಿಗಳು ಸಹ ಪಾಲಿಕೆ ಆಯುಕ್ತರು ಮಾಡಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post