ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ದಸರಾ #Shivamogga Dasara ವೈಭವದ ಅಂಬಾರಿ #Ambari ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ #Kote Shri Seetharamanjaneya Temple ಆವರಣದಲ್ಲಿ ಸಚಿವ ಮಧು ಬಂಗಾರಪ್ಪ, #Minister Madhu Bangarappa ಅನಿತಾ ಮಧು ಬಂಗಾರಪ್ಪ, ಶಾಸಕ ಚನ್ನಬಸಪ್ಪ, ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಸೇರಿದಂತೆ ಹಲವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.
Also read: ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಸ್ಥಳೀಯ ಸವಾಲುಗಳಿಗೆ ತಾಂತ್ರಿಕತೆಯ ಪರಿಹಾರ ನೀಡಿ
ಸಕ್ರೆಬೈಲು ಬಿಡಾರದ ಸಾಗರ ಆನೆ ಅಂಬಾರಿ ಹೊತ್ತು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತಿದ್ದು, ಅಂಬಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಸಾಲುಗಟ್ಟಿ ನಿಂತಿರುವು ಕಂಡು ಬಂದಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post