ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆರ್. ಸೆಲ್ವಮಣಿ R Selvamani ಅವರನ್ನು ವರ್ಗಾವಣೆ ಮಾಡಲಾಗಿದೆ ಮತ್ತು ತತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರು ಇ-ಆಡಳಿತ ಕೇಂದ್ರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ Gurudatta Hegade ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹೊನ್ನೆಗದ್ದೆ ಗ್ರಾಮದವರಾದ ಇವರು, ಬೆಂಗಳೂರಿನ ಆರ್. ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಬಳಿಕ 2014ರಲ್ಲಿ ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post