No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2024
in ಶಿವಮೊಗ್ಗ
0
ಡಾ.ಎಸ್.ಪಿ. ಪದ್ಮಪ್ರಸಾದ್ ಅಧ್ಯಕ್ಷತೆಯಲ್ಲಿ ಫೆ.1, 2ರಂದು ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಚಾಲುಕ್ಯನಗರದ ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದ್ದು,  ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಸ್.ಪಿ. ಪದ್ಮಪ್ರಸಾದ್ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಿ. ಮಂಜುನಾಥ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ 9 ಗೋಷ್ಠಿಗಳಿದ್ದು, ಮಹಾವೇದಿಕೆಗೆ ಡಿ.ಎಸ್.ನಾಗಭೂಷಣ್ ಹಾಗೂ ಮಹಾದ್ವಾರಗಳಿಗೆ ಕೆ.ವಿ.ಸುಬ್ಬಣ್ಣ, ಎಸ್.ವಿ.ಪರಮೇಶ್ವರಭಟ್ಟ, ಪ್ರೊ. ಬಿ.ಕೃಷ್ಣಪ್ಪ ಹೆಸರಿಡಲಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಓಓಡಿ ಸೌಲಭ್ಯವಿದೆ ಹಾಗೂ ಪುಸ್ತಕಗಳ, ಕೈಮಗ್ಗ ಹಾಗೂ ಖಾದಿ ಬಟ್ಟೆಗಳ ಮತ್ತು ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟವಿದೆ ಎಂದರು.

ಪೆ.1 ರಂದು ಬೆಳಗ್ಗೆ 9:30ಕ್ಕೆ ಸಾಹಿತ್ಯ ಗ್ರಾಮದ ಆವರಣದಲ್ಲಿ ಧ್ವಜಾರೋಹಣ ನಡೆಯಲ್ಲಿದ್ದು, ಹುಲಿ ಸಿಂಹಧಾಮ ಕಾರ್ಯನಿರ್ವಹಣಾಧಿಕಾರಿ ಮುಕುಂದಚಂದ್ರ, ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಹೆಚ್.ಸಿ. ಯೋಗೀಶ್ ರಾಷ್ಟ್ರಧ್ವಜ, ನಾಡಧ್ವಜ ಹಾಗೂ ಪರಿಷತ್ತಿನ ಧ್ವಜಾರೋಹಣ ಕಾರ್ಯ ನೆರವೇರಿಸಲಿದ್ದಾರೆ. ಬೆಳಗ್ಗೆ 10ಕ್ಕೆ ಗೋಪಾಳದ ಆನೆ ಪ್ರತಿಮೆ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಪ್ರಾರಂಭವಾಗುವ ಸಮ್ಮೇಳನಾಧ್ಯಕ್ಷರ ರಾಜಬೀದಿ ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹಾಲಾಡಿ ಚಾಲನೆ ನೀಡಲಿದ್ದಾರೆ ಎಂದರು.

ಬೆಳಗ್ಗೆ 11ಕ್ಕೆ ನಡೆಯುವ ಜ್ಯೋತಿ ಬೆಳಗೋಣ ಬನ್ನಿ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ಆಶಯ ಮಾತುಗಳನ್ನಾಡಲಿದ್ದಾರೆ.

ಕಸಾಪ ರಾಜ್ಯಾಧ್ಯಕ್ಷರಾದ ನಾಡೋಜ ಮಹೇಶ ಜೋಷಿ, ಹಿರಿಯ ಸಾಹಿತಿ ಎಲ್.ಎನ್.ಮುಕುಂದರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಎಸ್.ಪಿ.ಪದ್ಮಪ್ರಸಾದ್ ಸಮ್ಮೇಳನಾಧ್ಯಕ್ಷರ ಮಾತುಗಳನ್ನಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಲಕ್ಷ್ಮಣ ಕೊಡಸೆ ಉಪಸ್ಥಿತರಿರುವರು. ಶಾಸಕರಾದ ಶಾರದಾ ಪೂರ್ಯಾನಾಯ್ಕ, ಎಸ್.ಎನ್.ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ವೈದ್ಯ ಧನಂಜಯ ಸರ್ಜಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Kalahamsa Infotech private limitedನಂತರ ನಡೆಯುವ ಕವಿಗೋಷ್ಟಿಯಲ್ಲಿ ನಾಗರಕೊಡಿಗೆ ಗಣೇಶಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಸಾಗರದ ವಿ.ಗಣೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಮೂವತ್ತಕ್ಕು ಹೆಚ್ಚು ಕವಿಗಳು ಕವನ ವಾಚನ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ನಡೆಯುವ ಸಮ್ಮೇಳನಾಧ್ಯಕ್ಷರ ಬದುಕು ಬರಹ ಗೋಷ್ಟಿಯಲ್ಲಿ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ಸಮ್ಮೇಳನಾಧ್ಯಕ್ಷರ ಸೃಜನಶೀಲ ಸಾಹಿತ್ಯ ಕುರಿತು ಸಾಹಿತಿ ಡಾ.ಶ್ರೀಪತಿ ಹಳಗುಂದ, ಸಂಪಾದಿತ ಮತ್ತು ಅನುವಾದಿತ ಕೃತಿ ಕುರಿತು ಸಾಹಿತಿ ಡಾ.ಸುಂಕುಂ ಗೋವರ್ಧನ, ಅಂಕಣ ಬರಹ ವಿಮರ್ಶೆ ಹಾಗೂ ಜಾನಪದ ಕೃತಿಗಳ ಸಂಕೀರ್ಣದ ಕುರಿತು ಡಾ.ರತ್ನಾಕರ ಕುನಗೋಡು ಮಾತನಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಅಧಿಕಾರಿ ಎನ್.ಹರಿಕುಮಾರ್ ಉಪಸ್ಥಿತರಿರುವರು ಎಂದರು.

Also read: ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

ಸಂಜೆ 6 ಗಂಟೆಗೆ ನಡೆಯುವ ಕನ್ನಡ ಸಾಹಿತ್ಯ ಸವಾಲುಗಳು ಕುರಿತು ಸಾಹಿತಿ ಡಾ.ಮಾರ್ಷಲ್ ಶರಾಮ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಸಾಹಿತ್ಯ ಸಾಂವಿಧಾನಿಕ ಆಶಯಗಳು ಕುರಿತು ಎಲ್.ಎನ್. ಮುಕುಂದರಾಜ್, ಕನ್ನಡ ಸಾಹಿತ್ಯ ಜೀವವಿರೋಧಿ ನಿಲುವು ಕುರಿತು ಸಾಹಿತಿ ಬಿ.ಚಂದ್ರೇಗೌಡ, ಜಾನಪದ ಜಾಗತೀಕರಣ ಕುರಿತು ಪ್ರಾಧ್ಯಾಪಕ ಮೋಹನ ಚಂದ್ರಗುತ್ತಿ ಮಾತನಾಡಲಿದ್ದಾರೆ. ಉಪವಿಭಾಗಾಧಿಕಾರಿ ಸತ್ಯನಾರಾಯಣ.ಜಿ.ಹೆಚ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಫೆ.2ರಂದು ಬೆಳಗ್ಗೆ 10:30ಕ್ಕೆ ನಡೆಯುವ ಕನ್ನಡ ಬೇಗುದಿಗಳು ಗೋಷ್ಟಿಯಲ್ಲಿ ಮಾಜಿ ಶಾಸಕರಾದ ಆರ್.ಕೆ.ಸಿದ್ದರಾಮಣ್ಣ ಅಧ್ಯಕ್ಷತೆ ವಹಿಸಲಿದ್ದು, ಎನ್‍ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಒಕ್ಕೂಟ ಸರ್ಕಾರದಲ್ಲಿ ಕನ್ನಡದ ಸ್ಥಾನಮಾನ ಕುರಿತು ಡಾ.ಹೆಚ್.ಟಿ.ಕೃಷ್ಣಮೂರ್ತಿ, ಶಿಕ್ಷಣದಲ್ಲಿ ಕನ್ನಡ ಕುರಿತು ಡಾ.ಪಿ.ಭಾರತೀದೇವಿ, ವ್ಯವಹಾರದಲ್ಲಿ ಕನ್ನಡ ಕುರಿತು ಗೋ.ರಮೇಶಗೌಡ ಮಾತನಾಡಲಿದ್ದಾರೆ. ಮಧ್ಯಾಹ್ನ 12:30ಕ್ಕೆ ನಡೆಯುವ ಮುಳುಗುತ್ತಿರುವ ಮಲೆನಾಡು ಗೋಷ್ಟಿಯಲ್ಲಿ ಚಿಂತಕ ರಾಜಪ್ಪಮಾಸ್ತರ್ ಅಧ್ಯಕ್ಷತೆ ವಹಿಸಲಿದ್ದು, ಡಿವಿಎಸ್ ಅಧ್ಯಕ್ಷರಾದ ಕೊಳಲೆ ರುದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅರಣ್ಯ ಆತಂಕ ಕುರಿತು ಸತೀಶ್.ಜಿ.ಕೆ, ಕೃಷಿ ಸವಾಲು ಕುರಿತು ಕಂಬಳಗೆರೆ ರಾಜೇಂದ್ರ, ನೀರು ನಿರ್ವಹಣೆ ಕುರಿತು ಡಾ. ವಿ.ಎಲ್.ಎಸ್. ಕುಮಾರ್ ಮಾತನಾಡಲಿದ್ದಾರೆ.

ಕಥೆ ಹೇಳುವೆವು ಬನ್ನಿ ಕಥಾಗೋಷ್ಟಿಯಲ್ಲಿ ಸಾಹಿತಿ ಕಂ.ನಾಡಿಗ ನಾರಾಯಣ ಅಧ್ಯಕ್ಷತೆ ವಹಿಸಲಿದ್ದು, ಅರಣ್ಯ ಇಲಾಖೆ ನಿವೃತ್ತ ಹಿರಿಯ ವ್ಯವಸ್ಥಾಪಕರಾದ ರಘುರಾಮ ದೇವಾಡಿಗ ಉಪಸ್ಥಿತರಿರುವರು. ಕಥೆಗಾರರಾದ ರವಿ ಸಸಿತೋಟ, ಡಾ.ಕಲೀಂಉಲ್ಲಾ, ತುರುವನೂರು ಮಲ್ಲಿಕಾರ್ಜುನ, ಡಾ.ಜಿ.ಆರ್.ಲವ, ಸಿ.ಎಂ.ನೃಪತುಂಗ, ಪರಮೇಶ್ವರ ಕರೂರು, ಡಿ.ಹೆಚ್.ಸೂರ್ಯಪ್ರಕಾಶ್ ಕಥಾ ವಾಚನ ಮಾಡಲಿದ್ದಾರೆ. ನವಮಾಧ್ಯಮ ಬಿಕ್ಕಟ್ಟುಗಳು ಗೋಷ್ಟಿಯಲ್ಲಿ ಖ್ಯಾತ ವೈದ್ಯ ಡಾ. ಕೆ.ಆರ್.ಶ್ರೀಧರ್ ಅಧ್ಯಕ್ಷತೆ ವಹಿಸಲಿದ್ದು, ಹೆಚ್ಚುವರಿ ಜಿಲ್ಲಾ ಪೋಲೀಸ್ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೊಬೈಲ್ ಮತ್ತು ಯುವ ಮನಸ್ಸು ಕುರಿತು ಡಾ. ಎಸ್.ಟಿ.ಅರವಿಂದ, ಮೊಬೈಲ್ ಪೋಷಕರು ಮಕ್ಕಳು ಕುರಿತು ಡಾ. ಪ್ರೀತಿ ಶಾನುಭಾಗ್ ಮಾತನಾಡಲಿದ್ದು, ವಿದ್ಯಾರ್ಥಿನಿ ಸಾನಿಕಾ ಎಂ. ಹೆಗಡೆ, ಪೋಷಕರ ಪರವಾಗಿ ಶೋಭಾ ವೆಂಕಟರಮಣ, ಶಿಕ್ಷಕರ ಪರವಾಗಿ ಬಿ. ಪಾಪಯ್ಯ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 5:30ಕ್ಕೆ ನಡೆಯುವ ಹೊಸತಲೆಮಾರು ಸಾಹಿತ್ಯ ಸಂವೇದನೆ ಗೋಷ್ಟಿಯಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾದ ಮಹಾಬಲೇಶ್ವರ ಹೆಗಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಪತ್ರಕರ್ತರಾದ ಶಿವಾನಂದ ಕರ್ಕಿ, ಸಾಹಿತಿ ಡಾ.ಸ್ಟ್ಯಾನಿ ಲೋಪಿಸ್ ಕಾರ್ಗಲ್, ಉಪನ್ಯಾಸಕರಾದ ಸುನಿಲ್ ಕುಮಾರ್, ರಚನಾ ಕಾಮತ್ ಭಾಗವಹಿಸಲಿದ್ದಾರೆ.

ಸಂಜೆ 06:30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಜಿ. ಪ್ರಶಾಂತನಾಯಕ ಸಮಾರೋಪ ಮಾತುಗಳನ್ನಾಡಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ, ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್. ರುದ್ರೇಗೌಡ, ಬಿ.ಕೆ. ಸಂಗಮೇಶ್, ಬಿ.ವೈ. ವಿಜಯೇಂದ್ರ, ಉದ್ಯಮಿ ಎಂ. ಶ್ರೀಕಾಂತ್, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ಸ್ನೇಹಲ್ ಸುಧಾಕರ ಲೋಕಂಡೆ, ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಎಂ.ನವೀನ್ ಕುಮಾರ್, ಡಿ.ಗಣೇಶ್, ಎಸ್.ಷಣ್ಮುಖಪ್ಪ, ಮಧುಸೂಧನ ಐತಾಳ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ಮಹಾದೇವಿ, ಬಿ.ಟಿ.ಅಂಬಿಕಾ, ಭೈರಾಪುರ ಶಿವಪ್ಪಗೌಡ, ಸೋಮಿನಕಟ್ಟಿ, ಅನುರಾಧ, ನಳೀನಾಕ್ಷಿ, ಎಸ್.ಶಿವಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

Next Post

ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL