ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಂಸದ ಬಿ.ವೈ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಪ್ರಕೋಷ್ಠಗಳ ಸಂಯೋಜಕರಾದ ಭಾನುಪ್ರಕಾಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್ ಮತ್ತು ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ರಾಮಣ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್, ಶಿವರಾಜು, ಧರ್ಮ ಪ್ರಸಾದ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















