ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಚಾಮರಾಜ ನಗರದ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಆರ್. ಧ್ರುವನಾರಾಯಣ್ ರವರ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಭೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಮತ್ತು ಸಾಧನೆಯನ್ನು ಸ್ಮರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆರ್.ಪ್ರಸನ್ನ ಕುಮಾರ್, ಕೆ.ಬಿ.ಪ್ರಸನ್ನಕುಮಾರ್, ಬಲದೇವಕೃಷ್ಣ, ರಮೇಶ್ ಹೆಗ್ಡೆ, ಆರ್.ಎಂ.ಮಂಜುನಾಥಗೌಡ, ಚಂದ್ರಶೇಖರ್, ಚಂದ್ರಭೂಪಾಲ್, ರವಿಕುಮಾರ್ ಮತ್ತಿತರರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















