ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ಆಯೋಜಿಸಲಾಗಿದ್ದ 17 ವರ್ಷದೊಳಗಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆಯಲ್ಲಿ ಸಾಂದೀಪಿನಿ ಆಂಗ್ಲ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.
ಸಾಂದೀಪನಿ ಆಂಗ್ಲ ಶಾಲೆಯ 8ನೇ ತರಗತಿ ಓದುತ್ತಿರುವ ಅವಳಿಗಳಾದ ಎನ್.ಕೆ. ರುಜ್ವಲ್ ಮಳಲಿ ಮತ್ತು ಎನ್.ಕೆ. ರುಜುಲಾ ಮಳಲಿ ಇವರಿಬ್ಬರು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಇದೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Also read: ಬಿಗ್ ಬಾಸ್ ಕನ್ನಡ | ಮೊದಲ ಎಲಿಮಿನೇಷನ್’ನಲ್ಲೇ ಯಮುನಾ ಮನೆಯಿಂದ ಔಟ್
ಇದೇ ಮೊದಲ ಬಾರಿಗೆ ಅವಳಿಗಳು ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಈ ಪ್ರತಿಭಾವಂತ ಅವಳಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸವರ್ಮ, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
ಲಯನ್ಸ್ ಕ್ಲಬ್ ಶುಗರ್ ಟೌನ್, ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆ ಹಾಗೂ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯಕ್ತಾಶ್ರಯದಲ್ಲಿ ಸ್ಪರ್ಧೆ ಆಯೋಜನೆಗೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post