ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ದಿನನಿತ್ಯ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಮಹಾವೀರ ವೃತ್ತ ದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ ಪ್ರತಿಭಟಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಅಡುಗೆ ಅನಿಲದ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ತಿಂಗಳಲ್ಲೇ ಎರಡು ಬಾರಿ ಅಡುಗೆ ಅನಿಲದ ದರವನ್ನು ಏರಿಕೆ ಮಾಡಿದೆ. ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ದೇಶದ ಶ್ರೀಸಾಮಾನ್ಯನ ಮೇಲೆ ಬರೆ ಎಳೆಯುತ್ತಿರುವುದನ್ನು ಖಂಡಿಸಿದೆ.


ಈಗಾಗಲೇ ಹಲವಾರು ರೈತ-ಕಾರ್ಮಿಕ ಜನವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ಬಿಜೆಪಿ ಸರ್ಕಾರ, ದೇಶದ ಮೂರು ವಲಯಗಳನ್ನು ಖಾಸಗೀಕರಣ ಮಾಡಲು ಮಾಡಲು ತೀರ್ಮಾನಿಸಿರುವುದು ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದ್ದು, ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸಿದೆ.


ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಪಿ. ಗಿರೀಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಭವ್ಯ, ರಾಜ್ಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಗಳು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ , ರಾಜ್ಯ ಕಾರ್ಯದರ್ಶಿ ಮಹಮ್ಮದ್ ರಫಿ , ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಎನ್. ರಮೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ಮ, ಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಯಮುನ ರಂಗೇಗೌಡ , ಭದ್ರಾವತಿ ನಗರಸಭೆ ಸದಸ್ಯ ಶ್ರೇಯಸ್ (ಚಿಟ್ಟೆ), ಮಹಿಳಾ ಕಾಂಗ್ರೆಸ್ ನ ಸುವರ್ಣ ನಾಗರಾಜ್, ಗೀತಾ, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಟಿ ನಿತಿನ್ , ದಕ್ಷಿಣ ಬ್ಲಾಕ್ ಎಸ್. ಕುಮರೇಶ್, ಭದ್ರಾವತಿ ಯುವ ಕಾಂಗ್ರೆಸ್ ನಗರಾಧ್ಯಕ್ಷ ವಿನೋದ್ ಕುಮಾರ್, ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್ , ಜಿಲ್ಲಾ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ನವಲೆ, ಪುಷ್ಪಕ್ ಕುಮಾರ್ ಸಂದೀಪ್ ಗೋಣಿ. ಸಚಿನ್ ಶಿಂದೆ, ವೆಂಕಟೇಶ್ ಕಲ್ಲೂರ್, ಪವನ್ ,ರಾಹುಲ್, ಸಚಿನ್, ಚಿನ್ಮಯ್, ಮಸ್ತಾನ್, ತಬ್ರೆಜ್ ಹಾಗೂ ಇತರರು ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















