ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾರ್ಚ್ 12ರಿಂದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ Kote Marikamba Fair ನಡೆಯಲಿದ್ದು, ಈ ಬಾರಿ ಹಲವು ವಿಶೇಷಗಳಿಗೆ ಸಾಕ್ಷಿಯಾಗಲಿದೆ.
ಜಾತ್ರೆ ನಿಮಿತ್ತ ಗಾಂಧಿ ಬಜಾರ್ ಮುಖ್ಯದ್ವಾರದಲ್ಲಿ ಸುಮಾರು 45 ಅಡಿ ಎತ್ತರದಲ್ಲಿ ಚಾಮುಂಡೇಶ್ವರಿ ವಿಗ್ರಹ ರಾರಾಜಿಸಲಿದ್ದು, ಇದು ಚಲಿಸುವ ಸ್ಥಿತಿಯಲ್ಲಿ ಇರುತ್ತದೆ ಎಂಬುದು ವಿಶೇಷವಾಗಿದೆ.
ಈ ಬಾರಿಯ ಜಾತ್ರೆಯ ಯಶಸ್ಸಿಗಾಗಿ ಸುಮಾರು 18ಕ್ಕೂ ಅಧಿಕ ಉಪಸಮಿತಿಗಳನ್ನು ರಚನೆ ಮಾಡಲಾಗಿದೆ. ಇಡೀ ನಗರಕ್ಕೆ ವಿದ್ಯುತ್ ಅಲಂಕಾರ ಮಾಡಲಾಗುತ್ತಿದ್ದು, ವಿಶೇಷವಾಗಿ ಹೂವಿನ ಅಲಂಕಾರವನ್ನು ಎಂ. ಶ್ರೀಕಾಂತ್ ಅವರು ವಹಿಸಿಕೊಂಡಿದ್ದಾರೆ. ಇದಕ್ಕಾಗಿ ಬೆಂಗಳೂರಿನಿಂದ 40 ಜನರು ಆಗಮಿಸಲಿದ್ದಾರೆ.
Also read: ಕಾಡುಕೋಣಗಳ ಅನುಮಾನಾಸ್ಪದ ಸಾವು: ಸ್ಥಳೀಯರಲ್ಲಿ ಆತಂಕ
ಈ ಕುರಿತಂತೆ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್, ಮಹಾನಗರ ಪಾಲಿಕೆ ಸುಮಾರು 10 ಲಕ್ಷ ರೂ. ನೀಡಿದೆ. ಅದನ್ನು ಬಿಟ್ಟರೆ ನಾವು ಯಾರ ಬಳಿಯೂ ಚಂದ ಎತ್ತುವುದಿಲ್ಲ. ಇದೊಂದು ಸರ್ವಜನಾಂಗದ ಹಬ್ಬವಾಗಿದೆ. ಅತಿ ಹೆಚ್ಚು ಬಾಬುದಾರರಿದ್ದಾರೆ. ಸುಮಾರು 8ಕ್ಕೂ ಹೆಚ್ಚು ಜನಾಂಗದವರು ಈ ಜಾತ್ರೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಗಾಂಧಿಬಜಾರಿನಲ್ಲಿ ಪ್ರತಿಷ್ಠಾಪಿಸುವ ಅಮ್ಮನವರ ದರ್ಶನಕ್ಕಾಗಿ ವಿಕಲಚೇತನರಿಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು. ಜನಜಂಗುಳಿಯ ಒತ್ತಡ ಆಗದಂತೆ ದೇವಿಯ ದರ್ಶನಕ್ಕೆ ಸರಾಗ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಕೂಡ ನಡೆಸಲಾಗುವುದು ಎಂದರು.
ಪ್ರತಿನಿತ್ಯ ಬೆಳಿಗ್ಗೆ 7ರಿಂದ ವಿಶೇಷ ಪೂಜೆಗಳು ನಡೆಯಲಿದ್ದು, ಪ್ರಸಾದ ವಿನಿಯೋಗ ನಿರಂತರವಾಗಿ ನಡೆಯುತ್ತದೆ. ಮಾರ್ಚ್ 13ರ ಬೆಳಿಗ್ಗೆ ಮಾರಿಗದ್ದುಗೆಯಲ್ಲಿ ಎಡೆಪೂಜೆ ಆರಂಭವಾಗುತ್ತದೆ. ಆದರೆ ಸಾರ್ವಜನಿಕರು ಎಡೆಯನ್ನು ಗದ್ದುಗೆಗೆ ಹಾಕಿ ಹಾಗೆ ಹೋಗಬಾರದು. ಆ ಎಡೆಯನ್ನು ತೆಗೆದುಕೊಂಡು ಸಾರ್ವಜನಿಕರಿಗೆ ವಿತರಿಸಬೇಕೆಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post