No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಹದವಾದ ಮಳೆ | ಕೊಂಚ ಇಳಿಕೆಯಾದ ತಾಪಮಾನ | ರೈತರ ಮೊಗದಲ್ಲಿ ಸಂತಸ

kalpa News by kalpa News
May 17, 2024
in ಶಿವಮೊಗ್ಗ
0
ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಾದ್ಯಂತ ಒಂದೆರಡು ದಿನಗಳಿಂದ ಹದವಾದ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಗುರುವಾರ ಸಂಜೆಯಿಂದ ಪ್ರಾರಂಭಗೊಂಡ ಮಳೆ ಶುಕ್ರವಾರ ಬೆಳಿಗ್ಗೆಯವರೆಗೂ ನಿರಂತರವಾಗಿ ಸುರಿದ ಪರಿಣಾಮ ಬಿರುಬಿಸಿಲಿನಿಂದ ಬಳಲಿದ್ದ ಇಳೆ ತಂಪಾಗಿದೆ.

ಮಳೆಯಿಲ್ಲದೆ ಜಿಲ್ಲೆಯಲ್ಲಿನ ಪ್ರಮುಖ ನದಿಗಳು, ಹಳ್ಳಕೊಳ್ಳ, ಕೆರೆಕಟ್ಟೆಗಳು ಸಂಪೂರ್ಣ ಬತ್ತಿ ಹೋಗಿದ್ದವು.‌
ಕೊಳವೆ ಬಾವಿಗಳಲ್ಲಿ ನೀರು ಇಲ್ಲದಂತಾಗಿತ್ತು. ಇದರಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದರೆ, ಮತ್ತೊಂದೆಡೆ ಅಡಿಕೆ, ತೆಂಗಿನ ತೋಟಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

ಇದೀಗ ಸುರಿದ ಮಳೆ ರೈತರಲ್ಲಿ ಸಂತಸ ತಂದಿದೆ. ಜನರು ನಿಟ್ಟುಸಿರು ಬಿಡುವಂತಾಗಿದೆ.

ಜಿಲ್ಲೆಯ ವಿವಿಧೆಡೆ ಎರಡು ದಿನಗಳಿಂದ ಹದವಾಗಿ ಮಳೆಯಾಗಿದ್ದು, ರೈತರಿಗೆ ತುಸು ನೆಮ್ಮದಿ ನೀಡಿದೆ. ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗಿದೆ. ಬಿತ್ತನೆಗೆ ಇನ್ನೂ ಹೆಚ್ಚಿನ ಮಳೆಯ ಅಗತ್ಯವಿದೆ. ಈ ವಾರದಲ್ಲಿ ಹದ ಮಳೆಯಾದರೆ ಬಿತ್ತನೆ ಆರಂಭಗೊಳ್ಳಲಿದೆ. ದನಕರುಗಳಿಗೆ ಬೇಕಾದ ಮೇವು ಬಿತ್ತನೆಗೂ ಅನುಕೂಲವಾಗುತ್ತದೆ.
ಕೈಕೊಟ್ಟ ಮುಂಗಾರು
ಕಳೆದ ಬಾರಿ ಮುಂಗಾರು ಕೈಕೊಟ್ಟ ಕಾರಣ ಕೃಷಿ ಚಟುವಟಿಕೆಗೆ ಸಾಕಷ್ಟು ಹಿನ್ನಡೆಯಾಗಿತ್ತು.‌ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ ಕೆರೆಕಟ್ಟೆಗಳು ಒಣಗಿ ಹೋಗಿದ್ದವು. ಜಾನುವಾರುಗಳ ಮೇವಿಗೆ ಕೊರೆತು ಉಂಟಾಗಿತ್ತು. ಈ ಬಾರಿಯಾದರೂ ಉತ್ತಮ ಮಳೆಯಾಗುತ್ತದೆ ಎಂಬ ಆಶಾಭಾವನೆ ರೈತರದ್ದು.

Also read: ಮಲೆನಾಡಿನಲ್ಲಿ ಅಕ್ರಮ ಶಿಕಾರಿ? ಎದೆ ಸೀಳಿಕೊಂಡು ಹೋಯ್ತು ಮಿಸ್ ಫೈರ್ ಆದ ಗುಂಡು

ಜಿಲ್ಲೆಯಲ್ಲಿ ಕಳೆದ ಒಂದೆರಡು ದಿನಗಳಿಂದ ಅಲ್ಲಲ್ಲಿ ಮಳೆ ಆಗುತ್ತಿದೆ. ಇದರಿಂದ ಮುಂಗಾರು ಬಿತ್ತನೆಗೆ ಹೊಲವನ್ನು ಸಿದ್ಧಪಡಿಸಿಕೊಳ್ಳಲು ಇದರಿಂದ ಅನುಕೂಲವಾಗಿದೆ. ಆದರೆ ಕುಡಿಯುವ ನೀರು ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗಿಲ್ಲ. ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಮಳೆಯಿಂದ ತುಸು ನಿರಾಳವಾಗಿದ್ದಾರೆ.

ಗರಿಷ್ಠ ತಾಪಮಾನ
ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಮಳೆಯ ವಾತಾವರಣ ಸೃಷ್ಟಿಯಾಗಿ ಗುಡುಗು, ಸಿಡಿಲು ಸಹಿತ ಅಲ್ಲಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಭರವಸೆ ಮೂಡಿದೆ. ಜತೆಗೆ ಬಿಸಿಲಿನ ಜಳಕ್ಕೆ ತತ್ತರಿಸಿ ಹೋಗಿದ್ದ ಜನತೆ ಕೂಡ ನಿಟ್ಟಿಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿ ಹೋಗಿತ್ತು. ಇದೀಗ ಅಲ್ಲಲ್ಲಿ ಮಳೆ ಆಗುತ್ತಿರುವುದರಿಂದ ತಾಪಮಾನ ಕೊಂಚ ಇಳಿಕೆಯಾಗಿ 30 ಡಿಗ್ರಿ ದಾಖಲಾಗಿದೆ.

ತೀರ್ಥಹಳ್ಳಿ, ಹೊಸನಗರ, ಸಾಗರ, ರಿಪ್ಪನ್ ಪೇಟೆ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಆಗಿರುವುದು ಅಡಕೆ ತೋಟಗಳಿಗೆ ಅನುಕೂಲ ಆಗಿದೆ. ಜಿಲ್ಲೆಯ ನಾನಾ ಕಡೆ ಸುರಿದ ಮಳೆ, ರೈತರಲ್ಲಿ ಒಂದಷ್ಟು ಭರವಸೆ ಮೂಡಿಸಿದ್ದು, ಮುಂಗಾರಿನ ಕನಸು ಗರಿಗೆದರಿದೆ. ಕೆಲವು ಕಡೆ ಮುಂಗಾರು ಉಳುಮೆ ಆರಂಭಕ್ಕೆ ಈ ಮಳೆ ಹಸಿರು ನಿಶಾನೆ ತೋರಿಸಿದೆ. ಮುಂದಿನ ಮುಂಗಾರು ಮಳೆಗಳತ್ತ ರೈತರು ಆಸೆಗಣ್ಣಿನಿಂದ ನೋಡುವಂತೆ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿನಲ್ಲಿ ಅಕ್ರಮ ಶಿಕಾರಿ? ಎದೆ ಸೀಳಿಕೊಂಡು ಹೋಯ್ತು ಮಿಸ್ ಫೈರ್ ಆದ ಗುಂಡು

Next Post

ಕಡಿಮೆ ಅಂಕ ಪಡೆದವರಿಗೂ ಸೂಕ್ತ ಪಾಠದ ಮೂಲಕ ಉತ್ತಮ ಮಾರ್ಕ್ಸ್: ಪ್ರಿಯದರ್ಶಿನಿ

kalpa News

kalpa News

Next Post
ಕಡಿಮೆ ಅಂಕ ಪಡೆದವರಿಗೂ ಸೂಕ್ತ ಪಾಠದ ಮೂಲಕ ಉತ್ತಮ ಮಾರ್ಕ್ಸ್: ಪ್ರಿಯದರ್ಶಿನಿ

ಕಡಿಮೆ ಅಂಕ ಪಡೆದವರಿಗೂ ಸೂಕ್ತ ಪಾಠದ ಮೂಲಕ ಉತ್ತಮ ಮಾರ್ಕ್ಸ್: ಪ್ರಿಯದರ್ಶಿನಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL