ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ಭಾಗದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, #Heavy rain ತುಂಗಾ ನದಿ #Tunga river ತುಂಬಿ ಹರಿಯುತ್ತಿರುವ ಪರಿಣಾಮ ನಗರದ ಕೋರ್ಪಳಯ್ಯನ ಛತ್ರದ ಬಳಿಯಿರುವ ಐತಿಹಾಸಿಕ ಮಂಟಪ ಮುಳುಗಡೆಗೊಂಡಿದೆ. #Mantapa drowned
ತೀರ್ಥಹಳ್ಳಿ ಸೇರಿದಂತೆ ತುಂಗಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಅಪಾರ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.
Also read: ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?
ಈ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಂದರೆ ಸುಮಾರು 60 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ನೀರು ಹರಿಸಲಾಗುತ್ತಿದ್ದು, ನಗರ ವ್ಯಾಪ್ತಿಯಲ್ಲಿ ತುಂಗಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕೋರ್ಪಳಯ್ಯನ ಛತ್ರದ ಬಳಿಯಿರುವ ಐತಿಹಾಸಿಕ ಮಂಟಪ ಮುಳುಗಡೆಗೊಂಡಿದೆ.
ಮಂಟಪ ಮುಳಗಿರುವ ಹಿನ್ನೆಲೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇತುವೆ ಹಾಗೂ ಮಂಟಪದ ಬಳಿ ತೆರಳಿ ಕಣ್ತುಂಬಿಕೊಳ್ಳುತ್ತಾ, ಫೋಟೋ ತೆಗೆದುಕೊಳ್ಳುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post