ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇ-ಸ್ವತ್ತಿಗಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಮಹಾನಗರ ಪಾಲಿಕೆ #Shivamogga Palike ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ.ಸತೀಶ್‍ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.
ಇ-ಸ್ವತ್ತಿಗಾಗಿ ಪ್ರತಿನಿತ್ಯ ಸಾವಿರಾರು ಜನರು ಮಹಾನಗರ ಪಾಲಿಕೆಗೆ ಅಲೆದಾಡುತ್ತಿದ್ದಾರೆ. ಕಳೆದ ಮೂರು ತಿಂಗಳಿನಿಂದ ಇದಕ್ಕೆ ಪರಿಹಾರವೇ ಸಿಗದಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಶಿವಮೊಗ್ಗದ ಶಾಸಕರು ಮತ್ತು ಮಹಾನಗರ ಪಾಲಿಕೆಯ ಆಯುಕ್ತರು ಹೊಸದಾಗಿ ಕೌಂಟರ್ ಗಳನ್ನು ತೆರೆಯಲಾಗುವುದು ಎಂದು ಕಳೆದ ಎರಡು ತಿಂಗಳಿನಿಂದ ಹೇಳುತ್ತಲೇ ಬರುತ್ತಿದ್ದಾರೆ. ಹೇಳಿಕೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಸಮರೋಪಾದಿಯಲ್ಲಿ ಕೆಲಸ ಮಾಡಿ ಸೇವೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
Also read: `ಥಟ್ ಅಂತ ಹೇಳಿ’ ನಾ.ಸೋಮೇಶ್ವರ್ ಅವರಿಂದ ಶಿವಮೊಗ್ಗದಲ್ಲಿ ಕ್ವಿಜ್ | ನೀವೂ ಪಾಲ್ಗೊಳ್ಳಿ | ನೋಂದಣಿ ಹೇಗೆ?

ಸಾರ್ವಜನಿಕರಿಗೆ 3 ದಿನಗಳ ಒಳಗೆ ಕಾಲಮಿತಿಯಲ್ಲಿ ಸೇವೆ ನೀಡಲು ವಿಫಲರಾದಲ್ಲಿ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post