ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯದ #Kuvempu University ಪ್ರವಾಸೋದ್ಯಮ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಶಶಿರಾಜ್ ಯು. ಇವರು ಪಿಹೆಚ್.ಡಿ. ಪದವಿಯನ್ನು ಪಡೆದುಕೊಂಡಿರುತ್ತಾರೆ.
ಇವರು “ಇಂಪ್ಯಾಕ್ಟ್ ಆಫ್ ಮಾರ್ಕೆಟ್ ಸೆಗ್ಡೆಂಟೇಷನ್, ಟಾರ್ಗೆಟಿಂಗ್ ಆಂಡ್ ಪೊಸಿಷನಿಂಗ್ ಆನ್ ಮೆಡಿಕಲ್ ಟೂರಿಸಂ ಎ ಸ್ಟಡಿ ಇನ್ ಕರ್ನಾಟಕ” ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು. ಡಾ. ಬಿನೋಯ್ ಟಿ. ಎ., ಸಹ ಪ್ರಾದ್ಯಾಪಕರು, ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡು, ಕೇರಳ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.
ಇವರು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ವಾರಂಬಳ್ಳಿ ಗ್ರಾಮ, ಬಿರ್ತಿಯ ಸೋಮಪ್ಪ ಎ. ಮತ್ತು ಬೇಬಿ ಯು. ದಂಪತಿಗಳ ಪುತ್ರರಾಗಿದ್ದು ಪ್ರಸ್ತುತ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಶಿವಮೊಗ್ಗದಲ್ಲಿ ಸಹಾಯಕ ಪ್ರಾದ್ಯಾಪಕರಾಗಿ, ಪ್ರವಾಸೊದ್ಯಮ ಆಡಳಿತ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕಾಲೇಜಿನ ಎನ್.ಸಿ.ಸಿ. ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನವರಿ 22 ರಂದು ನಡೆದ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರ ಪಡೆದರು.
ಮುರುಳಿ ಅವರಿಗೆ ಪಿ.ಎಚ್.ಡಿ ಪದವಿ
ನಗರದ ಡಿ.ವಿ.ಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮುರುಳಿ ಟಿ.ಎಸ್ ಇವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ.ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಪ್ರೊಫೆಸರ್ ಮೇಟಿ ಮಲ್ಲಿಕಾರ್ಜುನ ಅವರ ಮಾರ್ಗದರ್ಶನದಲ್ಲಿ “ಕರಿಕ್ಯುಲಮ್ ಡೆವಲಪ್ಮೆಂಟ್ ಇನ್ ಲಾಂಗ್ವೇಜ್ 2:ಪೆಡಗಾಜಿಕಲ್ ಇಶ್ಯೂಸ್ ಅಂಡ್ ಪ್ರಾಬ್ಲಮ್ಸ್ ” ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.ಇವರು ಜ.22 ರಂದು ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣಪತ್ರ ಸ್ವೀಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















