ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರು ಸಮರ್ಥ ಆಡಳಿತ ನೀಡುತ್ತಿದ್ದು, ಅವರ ಏಳಿಗೆ ಸಹಿಸಲಾರದೇ ಹತಾಶರಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಡಾ ಹಗರಣದ ನೆಪವೊಡ್ಡಿ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದ್ದು, ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಅಹಿಂದ ಸಂಘಟನೆ ಉಪಾಧ್ಯಕ್ಷ ಹಾಗೂ ರಾಜ್ಯ ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಎಸ್.ಪಿ. ಶೇಷಾದ್ರಿ ಮತ್ತು ಅಹಿಂದ ಸಂಘಟನೆ ಪ್ರಮುಖರು ಇಂದು ಗೋಪಿ ವೃತ್ತದಲ್ಲಿ ಕತ್ತೆಗಳ ಮೆರವಣಿಗೆ ನಡೆಸಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದರು.
Also read: ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣ: ಪಿ.ಜಿ.ಆರ್ ಸಿಂಧ್ಯಾ
ಮುಡಾ ಪ್ರಕರಣಕ್ಕೆ #MUDA Scam ಸಂಬಂಧಿಸಿದಂತೆ ಈಗಾಗಲೇ ಸ್ಪಷ್ಠೀಕರಣ ನೀಡಲಾಗಿದೆ. ಬಿಜೆಪಿಯ ಯತ್ನಾಳ್ ಕೂಡ ಹಗರಣವಾಗಿದ್ದರೆ ತನಿಖಾ ವರದಿ ಬರಲಿ ಎಂದು ಹೇಳಿ ಪಾದಯಾತ್ರೆಯನ್ನು ಲೇವಡಿ ಮಾಡಿದ್ದಾರೆ. ಹೀಗಿದ್ದರೂ ಸಿಎಂ ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸುವ ವಿಪಕ್ಷಗಳ ಹುನ್ನಾರವನ್ನು ನಾವು ಖಂಡಿಸುತ್ತೇವೆ. ಪಾದಯಾತ್ರೆ ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಅಹಿಂದ ಸಂಘಟನೆಗಳ ಮೂಲಕ ವಿವಿಧ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಇಕ್ಕೇರಿ ರಮೇಶ್, ಎಸ್.ಬಿ. ಅಶೋಕ್ ಕುಮಾರ್, ಸುರೇಶ್ ಬಾಬು, ರಾಮಚಂದ್ರಪ್ಪ, ತಂಗರಾಜ್, ಕುಮಾರ್, ಮಮತಾ ಸಿಂಗ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post