ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಗಾಂಧಿನಗರದಲ್ಲಿ ಗುಪ್ತವಾಗಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಯುವತಿಯನ್ನು ರಕ್ಷಣೆ ಮಾಡಿದ್ದಾರೆ.
ಗಾಂಧಿನಗರದ 1ನೆಯ ಪ್ಯಾರಲಲ್ ರಸ್ತೆಯಲ್ಲಿ ಕಟ್ಟಡವೊಂದರ ನೆಲ ಮಾಳಿಗೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿತ್ತು. ಈ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ.
ಕಂಟ್ರಾಕ್ಟರ್ ಗಂಗಾಧರ್ ಎನ್ನುವವರು ಕಚೇರಿ ಹಾಗೂ ಗೋಡೌನ್ ನಡೆಸಲು ಬಾಡಿಗೆಗಾಗಿ ನೆಲಮಾಳಿಗೆಯಲ್ಲಿ ಸ್ಥಳ ಪಡೆದಿದ್ದರು ಎನ್ನಲಾಗಿದೆ. ಆದರೆ, ಈ ಸ್ಥಳದಲ್ಲಿ ಈತ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.
Also read: ಉದ್ಯಮಿ ಮನೆ ದರೋಡೆ | ನಕಲಿ ಪೊಲೀಸರ ಹೆಡೆಮುರಿ ಕಟ್ಟಿದ ಅಸಲಿ ಪೊಲೀಸರು
ಇಂದು ಪೊಲೀಸರು ದಾಳಿ ನಡೆಸಿದ್ದು, ಮೂವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾಧರ್ ಹಾಗೂ ಇನ್ನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post