ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ರೈಲ್ವೆ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು.
ಸಂಸ್ಕೃತ ಬೋರ್ಡ್ ರಾರಾಜಿಸುವ 554 ಅಮೃತ್ ಭಾರತ್ ರೈಲು ನಿಲ್ದಾಣಗಳು ಹಾಗೂ ದೇಶದಾದ್ಯಂತ ವಿವಿಧ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಆಧುನೀಕರಿಸಿದ ಮತ್ತು ವೇಗವಾದ ರೈಲ್ವೆ ಮೋದಿ ಸರ್ಕಾರದ ಗ್ಯಾರಂಟಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ರೂ. 41,000 ಕೋಟಿ ವೆಚ್ಚದಲ್ಲಿ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆಯ ಮೇಲ್ ಸೇತುವೆ, ಕೆಳಸೇತುವೆಗಳ ಶಿಲಾನ್ಯಾಸ, ಉದ್ಘಾಟನೆ, ರಾಷ್ಟçಕ್ಕೆ ಸಮರ್ಪಣೆ, 31 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ನಡೆಯಲಿದೆ.
Also read: ಕಾಂಗ್ರೆಸ್’ಗೆ ಮತ್ತೆ ಶಾಕ್ | ಚುನಾವಣೆಗೂ ಮುನ್ನ ಕೈ ಕೊಟ್ಟು ಬಿಜೆಪಿ ಸೇರಿದ ಇಬ್ಬರು ಶಾಸಕರು
ಕರ್ನಾಟಕದಾದ್ಯಂತ 24 ರಸ್ತೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣ ಕಾಮಗಾರಿಗೆ, ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿವರು ಇಂದು ಚಾಲನೆ ನೀಡಿದರು.
ಅರಸಾಳು ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಪ್ರಧಾನಿಯವರ ವರ್ಚುವಲ್ ಕಾರ್ಯಕ್ರಮದಲ್ಲಿ ಎಂಎಲ್’ಸಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯಾವೆಲ್ಲಾ ಕಾಮಗಾರಿಗೆ ಅನುದಾನ?
ಶಿವಮೊಗ್ಗ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ 24.37ಕೋಟಿ
ಸಾಗರ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ 26.44 ಕೋಟಿ
ತಾಳಗುಪ್ಪ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ 27.86 ಕೋಟಿ
ಅರಸಾಳು ರಸ್ತೆ ಮೇಲ್ ಸೇತುವೆ ಅಭಿವೃದ್ಧಿಗೆ 2.17 ಕೋಟಿ
ಅರಸಾಳುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್.ಟಿ. ಗೋಪಾಲ್, ನಾಗಾರ್ಜುನ ಸ್ವಾಮಿ, ರಾಜು, ದೇವರಾಜ್, ರಿಪ್ಪನಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಸ್ಥಳಿಯರು ಗ್ರಾಮಸ್ಥರು, ರೈಲ್ವೆ ಅಧಿಕಾರಿಗಳು, ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post