ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಸರಗೋಡಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಬೇಗುವಳ್ಳಿ ಬಳಿ ಎರಟಿಗಾ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ ಉಂಟಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾಸರಗೋಡಿನ ಮಂಜೇಶ್ವರದಿಂದ ಎರಟಿಗಾದಲ್ಲಿ ನಾಲ್ಕೈದು ಜನರು ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಬೇಗುವಳ್ಳಿ ಕೆರೆಯ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಮಂಜೇಶ್ವರದ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ. ಇವರಿಗೆ ಸುಮಾರು 58 ವರ್ಷವಯಸ್ಸಾಗಿತ್ತು.

ಕ್ಯಾಂಟರ್’ನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.. ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	






 Loading ...
 Loading ... 
							



 
                
Discussion about this post