ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಶಾಸಕಿ, ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್‍ಯಾನಾಯ್ಕ್ ಗೆಲುವು ದಾಖಲಿಸಿದ್ದಾರೆ.
ಈ ಹಿಂದೆ ಶಾಸಕಿಯಾಗಿ ಕಾರ್ಯನಿರ್ವಹಿಸಿದ ಶಾರದಾ ಪೂರ್‍ಯನಾಯ್ಕ್ ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಆದರೆ, ಈ ಬಾರಿ ಸುಮಾರು 15,000 ಮತಗಳ ಅಂತರದಲ್ಲಿ ಪ್ರತಿಸ್ಪರ್ಧಿ ಅಶೋಕ ನಾಯ್ಕ್ ಅವರನ್ನು ಪರಾಭವಗೊಳಿಸಿದ್ದಾರೆ.

ಇನ್ನು ಜೆಡಿಎಸ್ ಅಭ್ಯರ್ಥಿ ಶ್ರೀನಿವಾಸ್ ಕರಿಯಣ್ಣ 18,335 ಮತಗಳನ್ನು ಗಳಿಸುವ ಮೂಲಕ ಮೂರನೆಯ ಸ್ಥಾನಕ್ಕೆ ತೃಪ್ತಿಕೊಟ್ಟಿಕೊಂಡಿದ್ದಾರೆ. ಆಮ್‌ಆದ್ಮಿಪಾರ್ಟಿಯ ಮಂಜುನಾಥ್ 1711 ಮತಗಳನ್ನು ಗಳಿಸಿದ್ದಾರೆ.












Discussion about this post