ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯನೂರು ಗ್ರಾಮದ ಹಾಸ್ಟೆಲ್ ರಸ್ತೆಯಲ್ಲಿ ನಿನ್ನೆ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಈ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಎಎಸ್ಪಿ ಕಾರಿಯಪ್ಪ ಎ.ಜಿ. ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್ ಎಂ., ಮೇಲ್ವಿಚಾರಣೆಯಲ್ಲಿ ಕಾರ‍್ಯಾಚರಣೆ ನಡೆಸಲಾಗಿದೆ.
ಕುಂಸಿ ಪೊಲೀಸ್ ಠಾಣೆ ಪಿಐ ಹರೀಶ್ ಕೆ ಪಟೇಲ್, ಪಿಎಸ್‌ಐ ಶಾಂತರಾಜ್ ಹೆಚ್.ಜಿ. ಮತ್ತು ಸಿಬ್ಬಂದಿ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಹಾರನಹಳ್ಳಿ ಶಾಂತಿನಗರದ ವಿಷ್ಣು ಪಿ.(೨೬), ಶಿವಮೊಗ್ಗ ನಾರಾಯಣಪುರ ಗ್ರಾಮದ ಸುನಿಲ್ ನಾಯ (30) ಆವರನ್ನು ದಸ್ತಗಿರಿ ಮಾಡಲಾಗಿದೆ.
ಬಂಧಿತರಿಂದ ಅಂದಾಜು ಮೌಲ್ಯ 12,000 ರೂ. ಗಳ 310 ಗ್ರಾಂ ತೂಕದ ಒಣ ಗಾಂಜಾ ಹಾಗೂ ಅಂದಾಜು ಮೌಲ್ಯ 1,50,000 ರೂಗಳ ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post