ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸುವ ಮಹಾಶಿವರಾತ್ರಿ #MahaShivarathri ಹಿಂದೂಗಳ #Hindu ಪ್ರಮುಖ ಹಬ್ಬಗಳಲ್ಲೊಂದು. ನಗರದೆಲ್ಲೆಡೆ ಮಹಾಶಿವರಾತ್ರಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೇ ಜನರು ದೇವಸ್ಥಾನದೆಡೆಗೆ ಹೆಜ್ಜೆ ಹಾಕುತ್ತಿದ್ದುದು ಸಾಮಾನ್ಯವಾಗಿತ್ತು.
ವಿನೋಬನಗರ ಶಿವಾಲಯ, ರವೀಂದ್ರನಗರ ಪಾರ್ಕ್ ನಲ್ಲಿರುವ ಶಿವ, ಹೊಳೆ ಹೊನ್ನೂರು ರಸ್ತೆ ಅರ್ಕೇಶ್ವರ ದೇವಸ್ಥಾನ , ಕೋಟೆ ಬೀಮೇಶ್ವರ, ವೀರಶೈವ ಕಲ್ಯಾಣ ಮಂದಿರದ ಆವರಣದಲ್ಲಿರುವ ಕಾಶಿ ವಿಶ್ವನಾಥ ವಿಶೇಷ ಧಾರ್ಮಿಕ ಕಾರ್ಯಕ್ರಮ ಜರುಗಿತು.
ದೇವಾಲಯಕ್ಕೆ ಬರುವ ಭಕ್ತರಿಗೆ ವಿನೋಬನಗರ ಶಿವಾಲಯದ ಆವರಣದಲ್ಲಿ ಪಾನಕ ವಿತರಣೆ ಮಾಡಲಾಯಿತು. ಹಾಗೂ ಶಿವರಾತ್ರಿ ಪ್ರಯುಕ್ತ 6 ಅಡಿ ಎತ್ತರದ ಅಗರಬತ್ತಿ ನಿರ್ಮಿಸಿರುವುದು ವಿಶೇಷವಾಗಿದೆ. ರವೀಂದ್ರನಗರ ಪಾರ್ಕ್ ನಲ್ಲಿರುವ ಶಿವ ಪ್ರತಿಮೆಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹೊಳೆ ಹೊನ್ನೂರು ರಸ್ತೆಯ ಅರಕೇಶ್ವರ ದೇವಸ್ಥಾನದಲ್ಲಿ ಈ ಬಾರಿ ವಿಶೇಷವಾಗಿ ಶಿವರಾತ್ರಿ ಆಚರಣೆ ಮಾಡಲಾಗುತ್ತಿದ್ದು, ರಕ್ತದಾನ ಶಿಬಿರ, ಸಸಿ ನೆಡುವ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
Also read: ಬಿಎಸ್‌ವೈ ಹುಟ್ಟುಹಬ್ಬ ಹಿನ್ನೆಲೆ: ಫೆ.27ರಂದು ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ
ಇತಿಹಾಸ ಪ್ರಸಿದ್ಧ ಕೋಟೆ ಬೀಮೇಶ್ವರ ದೇವಾಲಯದಲ್ಲಿ ನಸುಕಿನಿಂದಲೇ ವಿಶೇಷ ಪೂಜಾ ಕೈಕಂರ್ಯ ನಡೆಸಲಾಯಿತು. ವೀರಶೈವ ಕಲ್ಯಾಣ ಮಂದಿರದ ಆವರಣದಲ್ಲಿರುವ ಕಾಶಿ ವಿಶ್ವನಾಥನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿತು.
ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು.
ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ. ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಭಕ್ತರ ಬಲವಾದ ನಂಬಿಕೆ.
ಶಿವ ದೇವಾಲಯಗಳ ವಿಶೇಷ ಅಲಂಕಾರದ ಚಿತ್ರಗಳು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post