ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಮಟ್ಟದ ಕರಾಟೆ #Karate ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ #Jain Public School 10ನೇ ತರಗತಿ ವಿದ್ಯಾರ್ಥಿನಿ ಮದಿಹ ಇಬ್ರಾಹಿಂ ಅವರು ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಜೈನ್ ಪಬ್ಲಿಕ್ ಶಾಲೆ ಸತತ 11 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ.
Also read: ಮಡಿಕೇರಿ | ಭಾರೀ ವರ್ಷಧಾರೆ | 24 ಗಂಟೆಯಲ್ಲಿ ಎಷ್ಟು ಮಳೆಯಾಯ್ತು? ಹಾರಂಗಿ ಡ್ಯಾಂನಲ್ಲಿ ಎಷ್ಟು ನೀರಿದೆ?
ಇದರಂತೆಯೇ, ಜೈನ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮದಿಹ ಅವರು ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾಳೆ.
ಮದಿಹಾ ಇಬ್ರಾಹಿಂನ ಈ ಸಾಧನೆಯು ಕಠಿಣ ಪರಿಶ್ರಮ ಮತ್ತು ಖುಷಿಯ ಫಲವಾಗಿದೆ. ಈ ಯಶಸ್ಸಿಗೆ ಪೋಷಕರು ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post