ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ಮತ್ತು ಕಾಂಗ್ರೆಸ್ 2 ಸರ್ಕಾರಗಳು ಮುಳುಗಡೆ ರೈತರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಕೂಡಲೆ ಬಗೆಹರಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯನ್ನು Parliamentary Election ಬಹಿಷ್ಕಾರ ಮಾಡಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತಿ.ನಾ.ಶ್ರೀನಿವಾಸ್ ಹೇಳಿದರು.
ಅವರು ಇಂದು ಡಾ.ಬಿ.ಆರ್. ಅಂಬೇಡ್ಕರ್ ಕ್ರಾಂತಿ ಸೇನೆಯ Dr. B.R. Ambedkar Kranti Sene ಸಹಕಾರದೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ಥರು ಸೇರಿದಂತೆ ಮುಳುಗಡೆ ರೈತರ ಸಮಸ್ಯೆಯನ್ನು ಯಾವುದೇ ಸರ್ಕಾರಗಳು ಬಗೆಹರಿಸಲಿಲ್ಲ. 2 ಸರ್ಕಾರಗಳು ಮಾತಿಗೆ ತಪ್ಪಿದವು. ಈಗ ಸಚಿವರಾಗಿರುವ ಮಧುಬಂಗಾರಪ್ಪನವರು ಮುಳುಗಡೆ ಸಂತ್ರಸ್ಥರ ಪರವಾಗಿ ಪಾದಯಾತ್ರೆಯನ್ನೇ ಮಾಡಿದ್ದರು, ಆಗ ಮುಖ್ಯಮಂತ್ರಿಯಾಗಿದ್ದ ಬೊಮ್ಮಾಯಿ ಅವರು, ಮತ್ತು ಬಿ.ಎಸ್.ಯಡಿಯೂರಪ್ಪನವರು ಸಂತ್ರಸ್ಥರ ಸಮಸ್ಯೆಯನ್ನು ಬಗೆಹರಿಸುವುದಾಗಿ ಹೇಳಿದ್ದರು. ಆದರೆ ಇಬ್ಬರೂ ಕೂಡ ಬಗೆಹರಿಸಲಿಲ್ಲ ಎಂದರು.
ಬಿ.ಎಸ್. ಯಡಿಯೂರಪ್ಪನವರು B S Yadiyurappa ಚುನಾವಣೆಗೆ ಮುನ್ನ 15 ದಿನಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಮಾತು ಕೊಟ್ಟಿದ್ದರು. ಹಾಗೆಯೇ ಆಗ ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸಂತ್ರಸ್ಥರ ಸಮಸ್ಯೆಗಳನ್ನು ಅತಿ ಬೇಗನೆ ಬಗೆಹರಿಸುವುದಾಗಿ ಹೇಳಿದ್ದರು. ಈಗ ಅಧಿಕಾರಕ್ಕೆ ಬಂದಿದ್ದಾರೆ ಆದರೂ ಕೂಡ ಬಗೆಹರಿಸಿಲ್ಲ ಎಂದರು.
Also read: ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಎಲೆಕ್ಷನ್ ಸರ್ವೆ: ಕರ್ನಾಟಕದಲ್ಲಿ ಈ ಪಾರ್ಟಿ ಸ್ವೀಪ್!
ಮಲೆನಾಡು ಭಾಗದಲ್ಲಿ ರೈತರ ಭೂಮಿಹಕ್ಕಿನ ಸಮಸ್ಯೆಯೇ ತೀವ್ರವಾಗಿದೆ. ಕಂದಾಯ ಭೂಮಿಗಳೆಲ್ಲ ಅರಣ್ಯ ಭೂಮಿಗಳಾಗಿ ಪರಿವರ್ತನೆಯಾಗುತ್ತಿದೆ. ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ನೋಟೀಸ್ ಕೊಟ್ಟು ಕಿರುಕುಳ ನೀಡಲಾಗುತ್ತಿದೆ. ಹಲವು ದಶಕಗಳಿಂದ ವಾಸಿಸುತ್ತಿರುವ ಅವರ ಪಾಡು ಹೇಳತೀರದಾಗಿದೆ. ಕಾಯ್ದೆಗಳ ಅಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೇ ಈ ಸಮಸ್ಯೆಯನ್ನು ಬಗೆಹರಿಸಬಹುದಾಗಿದೆ. ಆದರೆ ಇಚ್ಛಶಕ್ತಿ ಯಾರಿಗೂ ಇಲ್ಲ ಎಂದರು.
ತಕ್ಷಣವೇ ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂಧಿಸಲು ಮುಂದಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು, ಸಂಸದ ಬಿ.ವೈ.ರಾಘವೇಂದ್ರ MP Raghavendra ಅವರು, ಮಾತು ಕೊಟ್ಟಂತೆ ಸಂತ್ರಸ್ಥರ ಸಮಸ್ಯೆ ಮತ್ತು ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ, ಬರುವ ಲೋಕಸಭಾ ಚುನಾವಣೆಯನ್ನು ನಾವು ಬಹಿಷ್ಕಾರ ಹಾಕುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ಕ್ರಾಂತಿ ಸೇನೆಯ ರಾಷ್ಟ್ರೀಯ ಉಪಾಧ್ಯಕ್ಷ ಅರ್ಮಾನ್ ಎ., ಮುನಿಯಪ್ಪ, ಮಹೇಶ್, ವೇದಮೂರ್ತಿ, ಶಿವು, ಶ್ರವಣ, ಕನ್ಯಿಪ್ಪ ಮುಂದಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post