ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ ನಗರದಲ್ಲಿ ಮನೆಯಿಂದಲೇ ಮತದಾನ ಆರಂಭವಾಗಿದ್ದು, 90 ವರ್ಷದ ಮೀರಿದ ಇಬ್ಬರು ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರು ತಮ್ಮ ಹಕ್ಕು ಚಲಾಯಿಸಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಅಂಗವಾಗಿ ಭಾರತ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.
ಇದರಂತೆ ಇಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಶರಾವತಿ ನಗರದ 91 ವರ್ಷದ ಹಿರಿಯ ನಾಗರೀಕರಾದ ಚಂದ್ರಶೇಖರಪ್ಪ, ಕೋಟೆ ರೋಡ್ ವ್ಯಾಪ್ತಿಯ 90 ವರ್ಷದ ಹಿರಿಯ ನಾಗರಿಕರಾದ ಅನ್ನಪೂರ್ಣಮ್ಮ ಹಾಗೂ ಹೊಸಮನೆ ವ್ಯಾಪ್ತಿಯ ಹನುಮಂತರಾಯಪ್ಪ ವಿಶೇಷ ಚೇತನ ಮತದಾರರು ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಿದರು.
Also read: ಎಚ್ಚರಿಕೆ | ರಾಜ್ಯದ ಈ ಪ್ರದೇಶದಲ್ಲಿ ಬಿಸಿಗಾಳಿ, ಈ ಜಿಲ್ಲೆಗಳಲ್ಲಿ 4 ದಿನ ಮಳೆ ಸಾಧ್ಯತೆ | ಶಿವಮೊಗ್ಗದ ಕತೆಯೇನು?
ಈ ಸಂದರ್ಭದಲ್ಲಿ ಈ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಕಡ್ಡಾಯವಾಗಿ ಮತದಾನ ಮಾಡುವ ಅಭಿಲಾಷೆಯನ್ನು ಹೊಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಹೂಗುಚ್ಚ ನೀಡಿ ಅಭಿನಂದಿಸಿದರು.
ಮುಖ್ಯ ಯೋಜನಾಧಿಕಾರಿಗಳು, ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿಗಳು, ಸೆಕ್ಟರ್ ಆಫೀಸರ್ ಹಾಗೂ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು, ಬಿಎಲ್’ಓ ಅವರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 























