ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಶ್ವರಪ್ಪನವರ #Eshwarappa ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #Annamalai ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಶ್ವರಪ್ಪನವರ ಸ್ಪರ್ಧೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ಚುನಾವಣೆ ನಡೆಯುವುದು ಮೋದಿಗಾಗಿ ಎಂದರು.
ಇದು ರಾಷ್ಟ್ರೀಯ ಚುನಾವಣೆ ಆಗಿದ್ದು, ಜನರು ಸ್ಥಳೀಯ ನಾಯಕರನ್ನು ನೋಡುವುದಿಲ್ಲ. ರಾಷ್ಟ್ರೀಯ ನಾಯಕರನ್ನು ಮಾತ್ರ ನೋಡುತ್ತಾರೆ. ಕಣ್ಣುಮುಚ್ಚಿ ಕರ್ನಾಟಕದಲ್ಲಿ ಜನ ಬಿಜೆಪಿಗೆ ಓಟು ಹಾಕುತ್ತಾರೆ. ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಎನ್’ಡಿಎ ಮೈತ್ರಿಕೂಟ ಗೆಲ್ಲಲಿದೆ ಎಂದರು.
ಬಿಜೆಪಿ ಬಗ್ಗೆ ಟೀಕೆ ಮಾಡುವವರಿಗೆ ಜೂನ್ 4 ರಂದು ಉತ್ತರ ಸಿಗುತ್ತದೆ. ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಗೆಲುವು ಖಚಿತವಾಗಿದೆ.
ಗ್ಯಾರಂಟಿಗಳ ಬಗ್ಗೆ ಮಾತನಾಡಿದ ಅವರು, ಯಾವುದೇ ಗ್ಯಾರಂಟಿಗಳು ಸರ್ಕಾರವನ್ನು ಉರುಳಿಸುತ್ತವೆ. ಅಥವಾ ಅಧಿಕಾರಕ್ಕೆ ತರುತ್ತವೆ ಎನ್ನುವುದು ಸುಳ್ಳು. ಚುನಾವಣೆಗಳು ಗ್ಯಾರಂಟಿಗಳ ಮೇಲೆ ನಿಂತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿಗಳಿಂದ ಅಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳಿವೆ. ಹಾಗಾಗಿ ಕಾಂಗ್ರೆಸ್ ನವರು ಭ್ರಮೆಯಲ್ಲಿದ್ದಾರೆ. ಗ್ಯಾರಂಟಿಗಳಿಂದ ನಾವು ಗೆಲ್ಲುತ್ತೇವೆ ಎನ್ನುವುದು ಸುಳ್ಳು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















