ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ ಹಾಗೂ ಕೆಳದಿ ರಾಣಿ ಚೆನ್ನಮ್ಮಾಜಿಯವರ 352ನೇ ಸ್ಮರಣೋತ್ಸವವನ್ನು ನಾಳೆ ಮಾ.26ರ ಸಂಜೆ 5 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಸಂಕಲ್ಪ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಚನ್ನಬಸಪ್ಪ ತಿಳಿಸಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವ ಸಂಕಲ್ಪ ಮಹಿಳಾ ಘಟಕವನ್ನು ದಿವ್ಯ ಸಾನಿಧ್ಯ ವಹಿಸಲಿರುವ ಶಿರಹಟ್ಟಿಯ ಬಾಲೆಹೊಸೂರು ಮಠದ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಲಿದ್ದು, ಕೆಳದಿ ರಾಣಿ ಚೆನ್ನಮ್ಮಾಜಿಯವರ 352ನೇ ಸ್ಮರಣೋತ್ಸವದ ದಿವ್ಯ ಸಾನಿಧ್ಯವನ್ನು ಬೆಕ್ಕಿನಕಲ್ಮಠದ ಡಾ.ಶ್ರೀಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ವಿಶೇಷ ಉಪನ್ಯಾಸವನ್ನು ಇಂದುಮತಿ ಸಾಲಿಮಠ್ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶ್ರೀ ಬಸವೇಶ್ವರ ವೀರಶೈವ-ಲಿಂಗಾಯತ ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ನ ಅಧ್ಯಕ್ಷೆ ವೀರಮ್ಮ ಪಿ., ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವಾಣಿ ಕೋರಿ, ಜಿಪಂ ಮಾಜಿ ಸದಸ್ಯ ಕೆ.ಈ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ.ಯೋಗೀಶ್, ಯಮುನಾ ರಂಗೇಗೌಡ, ಸುರಭಿ ಮಹಿಳಾ ಮಂಡಳಿಯ ಅಧ್ಯಕ್ಷೆ ರೇಖಾ ಗಿರೀಶ್ ಆಗಮಿಸಲಿದ್ದಾರೆ ಎಂದರು.
ಅಂದು ಸಂಜೆ 4 ಗಂಟೆಗೆ ಶ್ರೀಗಳನ್ನು ಶಿವಮೂರ್ತಿ ವೃತ್ತದಿಂದ ಕುವೆಂಪು ರಂಗಮಂದಿರದವರೆಗೆ 500 ಮಹಿಳೆಯರಿಂದ ಪೂರ್ಣಕುಂಭದ ಮೂಲಕ ಸ್ವಾಗತಿಸಿ ಸಾಂಸ್ಕøತಿಕ ಮೇಳಗಳೊಂದಿಗೆ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ್ ಈ., ಸೋಮಶೇಖರ್ ಎಸ್.ಎಂ., ಲಿಂಗಮೂರ್ತಿ ಬಿ.ಎನ್., ಪುಷ್ಪಾ, ವಿನುತಾ ಅರವಿಂದ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















