ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಳೇ ದ್ವೇಷದ ಹಿನ್ನೆಲೆಯಲ್ಲಿ 2021ರಲ್ಲಿ ನಡೆದಿದ್ದ ಕೊಲೆ ಪ್ರಕರಣಗೊಂದಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ.
2021ರ ಆಗಸ್ಟ್ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು ಬಂಧಿಸಲಾಗಿತ್ತು. ಕೋಟೆ ಪೊಲೀಸ್ ಠಾಣೆ ಇನ್ಸೆö್ಪಕ್ಟರ್ ಆಗಿದ್ದ ಟಿ.ಕೆ. ಚಂದ್ರಶೇಖರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಾಂತರಾಜ್ ವಾದಿಸಿದ್ದರು. ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ 7 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post