ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಸುರಿದ ಭಾರೀ ಮಳೆ ಹಲವೆಡೆ ಅನಾಹುತ ಸೃಷ್ಟಿಸಿದೆ. ಭದ್ರಾವತಿ ತಾಲೂಕಿನ ಸಿರಿಯೂರು ಗ್ರಾಮದಲ್ಲಿ ಸಿಡಿಲು ಬಡಿದು ಸುಮಾರು 50 ಕುರಿಗಳು ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಹಿರಿಯೂರು- ಮಾರಿಕಣಿವೆ ಮೂಲದ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿದೆ. ಸಿರಿಯೂರು ಗ್ರಾಮದ ರವಿಕುಮಾರ್ ತೋಟದಲ್ಲಿ ಬೀಡುಬಿಟ್ಟಿದ್ದರು. ಕುರಿಗಾಯಿ ಕಳೆದ ನಾಲ್ಕು ತಿಂಗಳಿಂದ ಶಿವಮೊಗ್ಗದಲ್ಲಿ ಕುರಿ ಮೇಯಿಸುತ್ತಿದ್ದರು. ಕಳೆದ 14 ದಿನದಿಂದ ಸಿರಿಯೂರು ಸುತ್ತಮುತ್ತ ಕುರಿ ಮೇಯಿಸುತ್ತಿದ್ದರು.
ತಡರಾತ್ರಿ ತೋಟದಲ್ಲಿದ್ದ ವೇಳೆ ಸಿಡಿಲು ಬಡಿದು 400 ಕುರಿಗಳ ಪೈಕಿ ಸುಮಾರು ೫೦ ಕುರಿಗಳು ಸಾವನ್ನಪ್ಪಿವೆ ಎನ್ನಲಾಗಿದೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















