ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ತುಂಗಾ ನದಿಯ #Tunga River ಭೀಮನ ಮಡುವಿನಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತ ಮಹಿಳೆಯಲ್ಲಿ ನ್ಯೂ ಮಂಡ್ಲಿಯ ಮಾಲಿನಿ(57) ಎಂದು ಗುರುತಿಸಲಾಗಿದೆ.
Also read: ನಿರೂಪಕಿ ಅಪರ್ಣಾ ನಿಧನ | ಇಂದು ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
ಜುಲೈ 10ರಂದು ಮಹಿಳೆ ಕಾಣೆಯಾಗಿದ್ದು, ಈ ಕುರಿತಂತೆ ದೊಡ್ಡಪೇಟೆ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಈಕೆ ಮಾನಸಿಕವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದ್ದು, ಖಚಿತಗೊಂಡಿಲ್ಲ.
ಅಂದು ಕಾಣೆಯಾದ ಮಹಿಳೆ ಈಗ ಭೀಮನ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post