ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಳೆಹೊನ್ನೂರಿನಲ್ಲಿ ಹೊಸ ವರ್ಷದಂದು #New Year ಬಿರಿಯಾನಿ #Biryani ತಿನ್ನಲು ಬಾರ್‌ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಈ ಘಟನೆ ಸಂಭವಿಸಿದೆ.
Also read: ಬೆಂಗಳೂರು | ರಾಯರ ಮುಂದೆ ತನ್ಮಯತೆಯ ಭರತನಾಟ್ಯ ಪ್ರದರ್ಶನ
ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರವಿ ತಮ್ಮ ಚಿಕ್ಕಮ್ಮನ ಮಗನೊಂದಿಗೆ ಬಾರ್‌ನಲ್ಲಿ ಬಿರಿಯಾನಿ ತಿನ್ನಲು ತೆರಳಿದ್ದರು. ಈ ಸಂದರ್ಭ ಬಾರ್‌ನಲ್ಲಿದ್ದ ಇಬ್ಬರು ಯುವಕರು ರವಿ ಮೇಲೆ ದಾಳಿ ನಡೆಸಿದ್ದಾರೆ. ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post