ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖಾಸಗಿ ಬಸ್ ಹಾಗೂ ಆಟೋದ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ, ಓರ್ವ ಮೃತಪಟ್ಟು ಮೂವರು ಗಾಯಗೊಂಡ ಘಟನೆ ತಾಲೂಕಿನ ಗಾಜನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ #National Highway ನಡೆದಿದೆ.
ಮೃತ ವ್ಯಕ್ತಿಯನ್ನು ಬುದ್ಧ ನಗರದ ನಿವಾಸಿ ಪ್ರೇಮ್ ಕುಮಾರ್ (28) ಎಂದು ಗುರುತಿಸಲಾಗಿದೆ.
ಇವರು ಶಿವಮೊಗ್ಗದ ಡಿಸಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಟೈಪಿಸ್ಟ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















