ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಎಸ್’ಆರ್’ಟಿಸಿ ಬಸ್ #KSRTC Bus ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಪುನೀತ್(26) ಎಂದು ಗುರುತಿಸಲಾಗಿದೆ. ಮೃತ ಯುವಕ ತೀರ್ಥಹಳ್ಳಿಯ ಚಿತ್ರಮಂದಿರದಲ್ಲಿ ಡೆವಿಲ್ ಸಿನಿಮಾದ #Devil Movie ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮರಳುತ್ತಿದ್ದನು ಎಂದು ಹೇಳಲಾಗಿದೆ.
ಮೃತ ಯುವಕ ಮೀನುಗುಂದ ಗ್ರಾಮದ ಯುವಕ ಕುರುವಳ್ಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಅಪಘಾತ ಆದಾಗ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನೆ ಮಾಡುವ ಮೊದಲೇ ಯುವಕ ಸಾವನ್ನಪ್ಪಿದ್ದಾನೆ.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















