ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2024ನೇ ಸಾಲಿನಲ್ಲಿ ಅಗ್ನಿಪಥ್ #Agnipath ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಆಗಸ್ಟ್ 22 ರಿಂದ ಆಗಸ್ಟ್ 31ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ.
ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ.
Also read: ಬಳ್ಳಾರಿ | ಆ.16ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ
ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂಬುದನ್ನು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post