ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಖಾಸಗಿ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ತಾಲೂಕಿನ ಪಿಳ್ಳಂಗೆರೆಯಲ್ಲ ಘಟನೆ ನಡೆದಿದ್ದು, ಸ್ವಲ್ಪದಲ್ಲಿ ದೊಡ್ಡ ಅನಾಹುತ ತಪ್ಪುವುದರ ಜೊತೆಗೆ ಪ್ರಾಣ ಸೇರಿ ಯಾವುದೇ ರೀತಿಯಲ್ಲಿ ಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಚಾಲಕನಿಗೆ ಗಾಯಗಳಾಗಿವೆ.
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ.
Also read: ಬಹು ಬಾಷಾ ಗಾಯಕಿ ಉಷಾ ಉತ್ತುಪ್ ಪತಿ ಜಾನಿ ಚಾಕೋ ಉತ್ತುಪ್ ನಿಧನ
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿಯಾಗುತ್ತಿದ್ದಂತೆ ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್ ಪ್ರವಹಿಸುತ್ತಿತ್ತು. ಇದೇ ವೇಳೆ ದಾರಿಯಲ್ಲಿ ತೆರಳುತ್ತಿದ್ದ ಇತರೆ ವಾಹನಗಳ ಪ್ರಯಾಣಿಕರು ಕೂಡಲೆ ರಕ್ಷಣೆಗೆ ಧಾವಿಸಿದ್ದರು. ವಿದ್ಯುತ್ ಪ್ರವಹಿಸುತ್ತಿರುವುದನ್ನು ಗಮನಿಸಿ ಕೂಡಲೆ ಮೆಸ್ಕಾಂಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಅಲ್ಲದೆ ಅಪಘಾತಕ್ಕೀಡಾದ ಬಸ್ಸಿನಿಂದ ಗಾಬರಿಯಿಂದ ಇಳಿಯುತ್ತಿದ್ದ ಪ್ರಯಾಣಿಕರಿಗೆ ತಂತಿ ಬಗ್ಗೆ ಎಚ್ಚರ ವಹಿಸುವಂತೆ ಕೂಗಿ ತಿಳಿಸಿ ಹಲವರ ಪ್ರಾಣ ರಕ್ಷಿಸಿದ್ದಾರೆ.
ಅಪಘಾತದ ಸದ್ದು ಕೇಳಿ ಪಿಳ್ಳಂಗೆರೆ ಗ್ರಾಮಸ್ಥರು ಕೂಡ ನೆರವಿಗೆ ಧಾವಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತುರ್ತು ನೆರವು ನೀಡಿ, ಆಂಬುಲೆನ್ಸ್’ಗೆ ಕರೆ ಮಾಡಿದ್ದರು.
ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post