ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗದ ವಾಯು ಸಂಪರ್ಕವನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ಆಗಸ್ಟ್ 15ರಿಂದ ಚೆನ್ನೈ-ಶಿವಮೊಗ್ಗ ನಡುವಿನ ವಿಮಾನ ಹಾರಾಟವನ್ನು ಆರಂಭಿಸಲಾಗುತ್ತಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು, ಆಗಸ್ಟ್ 15ರಿಂದ ಶಿವಮೊಗ್ಗ-ಚೆನ್ನೈ ನಡುವೆ ವಿಮಾನ ಹಾರಾಟ ಆರಂಭವಾಗಲಿದೆ. ಚೆನ್ನೈ ವಿಮಾನ ಹಾರಾಟದ ಜೊತೆಯಲ್ಲಿ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೂ ಇದೇ ಕಂಪೆನಿ ವಿಮಾನ ಹಾರಾಟ ನಡೆಸಲಿದೆ ಎಂದಿದ್ದಾರೆ.
ನೈಟ್ ಲ್ಯಾಂಡಿಂಗ್ ಸಮಸ್ಯೆ ಬಗ್ಗೆ
ಇನ್ನು, ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ ಮಾಡುವಂತೆ ವಿಮಾನ ನಿಲ್ದಾಣದ #Shivamogga airport ನಿರ್ವಹಣಾ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಹೊಸದಿಲ್ಲಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶೀಘ್ರದಲ್ಲೇ ನಿವಾರಣೆಯಾಗಲಿದೆ ಎಂದಿದ್ದಾರೆ.
Also read: ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್’ಐಆರ್ | ಇಷ್ಟಕ್ಕೂ ಅವರ ಮೇಲಿನ ಆರೋಪವೇನು?
ಈ ಉಪಕ್ರಮವು ಮಲೆನಾಡು ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು, ಉದ್ಯಮವನ್ನು ಉತ್ತೇಜಿಸಲು ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಸಿದ್ಧವಾಗಿದೆ.
ಇದು ಮಲೆನಾಡಿನ ಉದ್ಯಮ, ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆ ಮೂಡಿಸಿದೆ. ಪ್ರಸ್ತುತ ಕುವೆಂಪು ವಿಮಾನ ನಿಲ್ದಾಣ ಎಂದು ಕರೆಯಲ್ಪಡುವ ಶಿವಮೊಗ್ಗ ವಿಮಾನ ನಿಲ್ದಾಣವು ನಾಲ್ಕು ಸ್ಥಳಗಳಿಗೆ ಸೇವೆ ಸಲ್ಲಿಸುತ್ತದೆ.
ಬೆಂಗಳೂರು (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ), ಹೈದರಾಬಾದ್ (ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ), ಗೋವಾ (ಮೋಪಾ ವಿಮಾನ ನಿಲ್ದಾಣ) ಮತ್ತು ತಿರುಪತಿ. ಚೆನ್ನೈಗೆ ವಿಮಾನಗಳ ಸೇರ್ಪಡೆ ಮತ್ತು ಸ್ಪೇಸ್ ಜೆಟ್ ವಿಸ್ತೃತ ಸೇವೆಗಳು ಪ್ರಾದೇಶಿಕ ಸಂಪರ್ಕ ಮತ್ತು ಆರ್ಥಿಕ ಚೈತನ್ಯವನ್ನು ಹೆಚ್ಚಿಸುವ ಕಾರ್ಯತಂತ್ರದ ನಡೆಯನ್ನು ಸೂಚಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post