ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಶುವೈದ್ಯಕೀಯ ಮಹಾವಿದ್ಯಾಲಯದ ಸಮೀಪ ಹಾದುಹೋಗಿರುವ ರೈಲ್ವೆ ಹಳಿಯ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಆಯುರ್ವೇದಿಕ್ ಕಾಲೇಜಿನ ಸಿಬ್ಬಂದಿಯಾಗಿದ್ದ ಈಶ್ವರ್ ಎಂದು ಗುರುತಿಸಲಾಗಿದೆ.

ಈಶ್ವರ್ ಅವರು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಹೆಚ್ಚು ಎಂದು ಶಂಕಿಸಲಾಗಿದೆ.
ರೈಲ್ವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post