ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ರಸ್ತೆಯಲ್ಲಿರುವ ಕೋರ್ಪಲಯ್ಯ ಛತ್ರದ ಬಳಿಯಿರುವ ತುಂಗಾನದಿ ತೀರದ ಮಂಟಪದಲ್ಲಿ ಇಂದು ಬಾಗಿನ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ ದೇವರ ದಯೆಯಿಂದ ನಾಡಿನಾದ್ಯಂತ ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ತುಂಗೆ ಕೂಡ ಮೈದುಂಬಿ ಹರಿಯುತ್ತಿದ್ದಾಳೆ. ಈ ಪವಿತ್ರ ಸಂದರ್ಭದಲ್ಲಿ ನಮ್ಮ ಸಂಸ್ಕøತಿಯಂತೆ ಬಾಗಿನ ಅರ್ಪಿಸಿ, ತುಂಗೆಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ತುಂಗಾನದಿ ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನದ ಪ್ರಮುಖ ಮೂಲವಾಗಿದ್ದು, ತುಂಗೆಗೆ ಬಾಗಿನ ಅರ್ಪಿಸುವ ಸಂಸ್ಕೃತಿ ನಮ್ಮ ನಾಡಿನ ನದೀಪೂಜಾ ಪರಂಪರೆಯ ಪ್ರತಿಬಿಂಬವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಹಾಗೂ ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲೆ ಹಾಗೂ ನಗರದ ಸಮಿತಿಯ ಪ್ರಮುಖರು, ವಿವಿಧ ಮೋರ್ಚಾಗಳ ಸದಸ್ಯರು, ಧಾರ್ಮಿಕ ಮುಖಂಡರು, ನಮ್ಮ ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post