No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೇಸರಿಯಲ್ಲಿ ಮಿಂದೆದ್ದ ಶಿವಮೊಗ್ಗ: ಗಣಪತಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ…

ಯುವಕರ ಸಂಭ್ರಮೋತ್ಸವ, ಕಲಾತಂಡಗಳ ಸಡಗರದ ನಡುವೆ ಶಾಂತಿಯುತ ಮೆರವಣಿಗೆ

kalpa News by kalpa News
September 9, 2022
in ಶಿವಮೊಗ್ಗ
0
ಕೇಸರಿಯಲ್ಲಿ ಮಿಂದೆದ್ದ ಶಿವಮೊಗ್ಗ: ಗಣಪತಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಪೊಲೀಸರ ಬಿಗಿ ಬಂದೋಬಸ್ತ್, ಯುವಕರ ಸಂಭ್ರಮೋತ್ಸವ, ಕಲಾತಂಡಗಳ ಸಡಗರಗಳ ನಡುವೆ ಶಾಂತಿಯುತವಾಗಿ ಸಾಗುತ್ತಿದ್ದು, ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯ ಜನ ವೀಕ್ಷಿಸಲು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ಬಜರಂಗದಳ, ವಿಶ್ವ ಹಿಂದು ಪರಿಷತ್, ಹಿಂದು ಮಹಾಸಭಾ ಸೇರಿದಂತೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು, ಅಪಾರ ಸಂಖ್ಯೆಯಲ್ಲಿ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಭಗವಾಧ್ವಜ ಹಿಡಿದು ಯುವಕರು ಜೈ ಶ್ರೀ ರಾಮ ಘೋಷಣೆ ಕೂಗುತ್ತಿದ್ದರು. ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಸ್‌ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿಬಜಾರ್, ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಬಿ.ಹೆಚ್.ರಸ್ತೆ, ಅಶೋಕವೃತ್ತ, ನೆಹರೂ ರಸ್ತೆ, ಗೋಪಿವೃತ್ತ, ದುರ್ಗಿಗುಡಿ, ಮಹಾವೀರ ವೃತ್ತ, ಬಾಲರಾಜ್ ಅರಸು ರಸ್ತೆ ಸೇರಿದಂತೆ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಕೇಸರಿ ಬಾವುಟ, ಬ್ಯಾನರ್, ಬಂಟಿಂಗ್ಸ್ ರಾರಾಜಿಸುತ್ತಿವೆ. ಪ್ರಮುಖ ವೃತ್ತಗಳನ್ನು ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳು ಕೇಸರಿ ಬಾವುಟಗಳನ್ನು ಕಟ್ಟಲಾಗಿದೆ.
ಅಮೀರ್ ಅಹಮ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಬೃಹತ್ ಫ್ಲೆಕ್ಸ್ ಹಾಕಲಾಗಿದೆ. ಇಡೀ ವೃತ್ತ ಕೇಸರಿ ಮಯವಾಗಿದೆ. ನೆಹರೂ ರಸ್ತೆಯಲ್ಲಿ ಭಗತ್‌ಸಿಂಗ್, ಸ್ವಾಮಿ ವಿವೇಕಾನಂದ, ಅಂಬೇಡ್ಕರ್, ರಾಣಾ ಪ್ರತಾಪ್ ಸಿಂಹ, ಸರ್ದರ್ ವಲ್ಲಭ ಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಪುರಂದರ ದಾಸರು, ಝಾನ್ಸಿರಾಣಿ ಲಕ್ಷ್ಮೀ ಬಾಯಿ ಸೇರಿದಂತೆ ಅನೇಕ ಮಹನೀಯರ ಕಟೌಟ್‌ಗಳನ್ನು ಹಾಕಲಾಗಿದೆ.

ಗಾಂಧಿಬಜಾರ್‌ನ ಪ್ರವೇಶದ್ವಾರದಲ್ಲಿ ಕುರುಕ್ಷೇತ್ರದಲ್ಲಿ ಶ್ರೀಕೃಷ್ಣ ಪರಮಾತ್ಮನ ಸಾರಥ್ಯದಲ್ಲಿ ಅರ್ಜುನ ಯುದ್ಧ ಮಾಡುತ್ತಿರುವ ಪ್ರತಿಕೃತಿಯನ್ನು ಸ್ಥಾಪಿಸಲಾಗಿದ್ದು, ಇದು ಎಲ್ಲರ ಗಮನ ಸೆಳೆಯುತ್ತಿದೆ. ಕೆಜಿಎಫ್-2 ಚಿತ್ರದಲ್ಲಿ ಕಲಾ ವಿಭಾಗದಲ್ಲಿ ಕೆಲಸ ಮಾಡಿರುವ ಓತಿಘಟ್ಟದ ಜೀವನ್ ಇದನ್ನು ನಿರ್ಮಿಸಿದ್ದಾರೆ. ನಿನ್ನೆ ರಾತ್ರಿಯಿಂದಲೇ ಈ ದೃಶ್ಯವನ್ನು ಅಪಾರ ಸಂಖ್ಯೆ ಜನಸ್ತೋಮ ಸೇರಿ ಕಣ್ತುಂಬಿಕೊಳ್ಳುತ್ತಿದ್ದುದು ಕಂಡು ಬಂತು. ಯುವಕ, ಯುವತಿಯರು ಫೋಟೋ, ಸೆಲ್ಪಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶಿವಪ್ಪನಾಯಕ ವೃತ್ತದಲ್ಲಿ ಶ್ರೀರಾಮಚಂದ್ರ, ವಿಷ್ಣು ದಶಾವತಾರ, ಆಂಜನೇಯ, ಡಾ.ಬಿ.ಆರ್. ಅಂಬೇಡ್ಕರ್ ಕಟೌಟ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸಲಾಗಿದೆ.
ಇನ್ನು ರಾಜಬೀದಿಯ ಮಾರ್ಗದಲ್ಲಿ ಯುವಕರ ದಂಡು ಬೈಕ್‌ಗಳಲ್ಲಿ ಜೈ ಶ್ರೀರಾಮ್ ಎಂದು ಕೂಗುತ್ತಾ ಸಾಗುತ್ತಿದ್ದರು. ಇನ್ನೂ ವಿಶೇಷವೆಂದರೆ ಗಣಪತಿಯ ರಾಜಬೀದಿ ಉತ್ಸವಕ್ಕೆ ಸ್ವಾಗತ ಕೋರುವ ಫೆಕ್ಸ್‌ಗಳ ಮಾರ್ಗದುದ್ದಕ್ಕೂ ಪುನಿತ್ ರಾಜ್‌ಕುಮಾರ್, ಪ್ರವೀಣ್ ನೆಟ್ಟಾರು, ಹಿಂದೂ ಹರ್ಷನ ಭಾವಚಿತ್ರ ಹಾಕಲಾಗಿದೆ. ಮಾರ್ಗದುದ್ದಕ್ಕೂ ವಿವಿಧ ಸಂಘಟನೆಗಳವರು ಗಣಪತಿಗೆ ಬೃಹತ್ ಹಾರಗಳನ್ನು ಹಾಕಲು ಸಿದ್ಧತೆ ನಡೆಸಿದ್ದರು.

Also read: ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

ಇನ್ನು ಮೊದಲು ಡಿಜೆಗೆ ಅವಕಾಶ ನೀಡದ ಪೊಲೀಸ್ ಇಲಾಖೆ ಒತ್ತಡ ಹೆಚ್ಚಾಗಿದ್ದರಿಂದ ಡಿಜೆಗೆ ಅವಕಾಶ ಕಲ್ಪಿಸಿದ್ದು, ಗೋಪಿ ವೃತ್ತದಲ್ಲಿ ಡಿಜೆ ನೃತ್ಯಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಮೆರವಣಿಗೆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ನಗರದ ಎಲ್ಲೆಡೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಸಿಸಿ ಟಿವಿ, ದಿವ್ಯದೃಷ್ಠಿ ಕಣ್ಗಾವಲು ಹಾಗೂ ಡ್ರೋಣ್ ಕ್ಯಾಮೆರಾಗಳಲ್ಲಿ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಲಾಗಿದೆ. ಎಎ ಸರ್ಕಲ್‌ನಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆರ್‌ಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪೊಲೀಸರು ವಿಶೇಷವಾಗಿ ಮಫ್ತಿಯಲ್ಲಿ ಇದ್ದು ನಿಗಾ ವಹಿಸುತ್ತಿದ್ದುದು ಕಂಡುಬಂದಿತು.

ಹೆಚ್ಚಿನ ಭದ್ರತೆಗಾಗಿ ಮೂರು ಸಾವಿರಕ್ಕೂ ಅಧಿಕ ಪೊಲೀಸರನ್ನು ಹೊರ ಜಿಲ್ಲೆಗಳಿಂದ ಕರೆಸಿಕೊಳ್ಳಲಾಗಿದೆ. ಎರಡು ಎಎಸ್ಪಿ, 19 ಡಿವೈಎಸ್ಪಿ, 40 ಪೊಲೀಸ್ ಇನ್ಸ್‌ಪೆಕ್ಟರ್, 71 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 1970 ಪೊಲೀಸ್ ಸಿಬ್ಬಂದಿ, 700 ಗೃಹರಕ್ಷಕ ಸಿಬ್ಬಂದಿ, 200 ಸಿಬ್ಬಂದಿಗಳನ್ನೊಳಗೊಂಡ ಆರ್‌ಎಎಫ್ ತುಕಡಿ, 15 ಕೆಎಸ್‌ಆರ್‌ಪಿ ತುಕಡಿ, 15 ಡಿ.ಎ.ಆರ್ ತುಕಡಿ, ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಮುನ್ನಚ್ಚರಿಕೆ ಕ್ರಮವಾಗಿ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಒಟ್ಟಾರೆಯಾಗಿ ಹಿಂದೆಂದಿಗಿಂತಲೂ ಅದ್ದೂರಿಯಾಗಿ ಗಣಪತಿ ರಾಜಬೀದಿ ಉತ್ಸವ ಸಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

Next Post

ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL