ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ರೌಡಿ ಶೀಟರ್’ಗಳಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೌಡಿ ಶೀಟರ್ ಗಳ ಮನೆಗಳ ಮೇಲೆ ಪೊಲೀಸರು ಶನಿವಾರ ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಎಸ್’ಪಿ ಜಿ.ಕೆ. ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಪೊಲೀಸ್ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು.
Also read: ರಾಘವೇಂದ್ರ ಸೋಲುತ್ತಾರೆ, ರಾಜ್ಯಾಧ್ಯಕ್ಷರು ಬದಲಾಗುತ್ತಾರೆ, ಪಕ್ಷ ಶುದ್ಧವಾಗುತ್ತದೆ: ಈಶ್ವರಪ್ಪ ತಿರುಗೇಟು
ಈ ವೇಳೆ ಮಾದಕ ವಸ್ತುಗಳು, ಮಾರಕಾಸ್ತçಗಳಿವೆಯೇ ಎಂದು ರೌಡಿ ಶೀಟರ್’ಗಳ ಮನೆಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು.
ಅಲ್ಲದೆ ರೌಡಿ ಶೀಟರ್’ಗಳು ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸಿದರು. ಲೋಕಸಭೆ ಚುನಾವಣೆ ಸಂದರ್ಭ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಅವರಿ ಎಚ್ಚರಿಕೆ ನೀಡಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಶಿವಮೊಗ್ಗ ಎ ಹಾಗೂ ಬಿ ಉಪ ವಿಭಾಗಗಳ ಡಿವೈಎಸ್ಪಿಗಳಾದ ಬಾಬು ಅಂಜನಪ್ಪ, ಸುರೇಶ್ ಎಂ, ಭದ್ರಾವತಿ ಉಪ ವಿಭಾಗ ಡಿವೈಎಸ್ಪಿ ನಾಗರಾಜ್, ಸಾಗರ ಉಪ ವಿಭಾಗ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣನಾಯ್ಕ್, ಶಿಕಾರಿಪುರ ಉಪ ವಿಭಾಗ ಡಿವೈಎಸ್ಪಿ ಕೇಶವ್, ತೀರ್ಥಹಳ್ಳಿ ಉಪ ವಿಭಾಗ ಡಿವೈಎಸ್ಪಿ ಗಜಾನನ ವಾಮನ ಸುತಾರ ಸೇರಿದಂತೆ ಆಯಾ ಠಾಣೆಗಳ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್’ಗಳು ದಾಳಿಯಲ್ಲಿ ಭಾಗಿಯಾಗಿದ್ದರು.
ಪ್ರತ್ಯೇಕ ತಂಡಗಳ ರಚನೆ ಮಾಡಿಕೊಂಡು ಏಕಕಾಲದಲ್ಲಿಯೇ ರೌಡಿ ಶೀಟರ್’ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post