ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಬೆಳ್ಳಿಮಂಡಲದ ಮಹತ್ವದ ಸಭೆಯು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಿವಮೊಗ್ಗ ಬೆಳ್ಳಿಮಂಡಲದ ಕಾರ್ಯಾಧ್ಯಕ್ಷರು ಹಾಗೂ ನೂತನವಾಗಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಡಿ. ಎಸ್. ಅರುಣ್‌ರವರನ್ನು ಅಭಿನಂದಿಸಲಾಯಿತು.
ಬಹಳ ಮುಖ್ಯವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಜನವರಿ ತಿಂಗಳಲ್ಲಿ ನಡೆಸಲಾಗುತ್ತಿರುವ ಪ್ರಾದೇಶಿಕ ಚಲನಚಿತ್ರೋತ್ಸವ, ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಚಲನಚಿತ್ರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು.
ಜನವರಿ ಎರಡನೇ ವಾರದಲ್ಲಿ ಪ್ರಾದೇಶಿಕ ಚಿತ್ರೋತ್ಸವ ಹಾಗೂ ಕೊನೆಯ ವಾರದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಅಂಬೆಗಾಲು ಕಿರುಚಿತ್ರ ಸ್ಪರ್ಧೆ-5:
ನಾಡಿನ ಪ್ರತಿಷ್ಟಿತ ಅಂಬೆಗಾಲು ಕಿರುಚಿತ್ರ ಸ್ಪರ್ಧೆ-5ನ್ನು ಸದ್ಯದಲ್ಲಿಯೇ ಕೆಲವು ನಿಯಮಗಳ ಸೂಕ್ತ ಮಾರ್ಪಾಡುಗಳನ್ನು ಮಾಡಿ ದಿನಾಂಕವನ್ನು ಪ್ರಕಟಿಸಲು ನಿರ್ಧರಿಸಲಾಯಿತು.
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಪ್ರತಿನಿಧಿ ಶ್ರೀನಿವಾಸ ಕೌಶಿಕ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್, ಬೆಳ್ಳಿಮಂಡಲದ ಸಂಚಾಲಕ ವೈದ್ಯ ಸೇರಿದಂತೆ ಶಿವಮೊಗ್ಗ ಬೆಳ್ಳಿಮಂಡಲ ಸದಸ್ಯರು ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲನಾ ತಂಡ ಸಭೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post