ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ನಿನ್ನೆ ತಡರಾತ್ರಿ ನಿದಿಗೆ ಬಳಿಯಲ್ಲಿ ಅಪಘಾತ ಸಂಭವಿಸಿದ್ದು, ಬೈಕ್’ನಲ್ಲಿ ವೇಗವಾಗಿ ಮೂವರು ಯುವಕರು ತೆರಳುತ್ತಿದ್ದು, ಲಾರಿಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.
ಭದ್ರಾವತಿ ಕಡೆ ತೆರಳುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.
Also read: ಬೆಟ್ಟ, ಕಾನು, ಗೋಮಾಳ ರಕ್ಷಣಾ ಯೋಜನೆ ಜಾರಿಗೆ ಅನಂತ ಹೆಗಡೆ ಅಶೀಸರ ಆಗ್ರಹ
ಡಿಕ್ಕಿಯಾದ ರಭಸಕ್ಕೆ ಬೈಕ್’ನಲ್ಲಿದ್ದ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಲಾರಿಗೆ ಡಿಕ್ಕಿ ಹೊಡೆಯುವ ಮುನ್ನ ಈ ಬೈಕ್ ಮತ್ತೊಂದು ಬೈಕ್’ಗೆ ಡಿಕ್ಕಿ ಹೊಡೆದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಒಂದೇ ಬೈಕ್ ನಲ್ಲಿ ಓರ್ವ 17 ವರ್ಷದ ಬಾಲಕ ಚೇತನ್ಯ(23) ಹಾಗೂ ತೇಜಸ್ವಿ(24) ಎಂಬ ಮೂವರು ಬೈಕ್ ನಲ್ಲಿ ಬರುವಾಗ ಈ ಘಟನೆ ಸಂಭವಿಸಿದೆ. ಇವರುಗಳು ಶಿವಮೊಗ್ಗದ ವಿದ್ಯಾನಗರದ ಹುಡುಗರು ಎಂದು ಹೇಳಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post